ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿಹಾರಕ್ಕೆ ಬಂದಿದ್ದ ಕಾಲೇಜು ವಿದ್ಯಾರ್ಥಿಗಳು ನೀರು ಪಾಲು

ಶನಿವಾರ ಮಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.
06:37 PM Dec 09, 2023 IST | Gayathri SG

ಮಂಗಳೂರು: ಶನಿವಾರ ಮಂಗಳೂರಿನಲ್ಲಿ ಘೋರ ದುರಂತವೊಂದು ಸಂಭವಿಸಿದೆ. ಸಮುದ್ರತೀರಕ್ಕೆ ವಿಹಾರಕ್ಕೆಂದು ತೆರಳಿದ್ದ ಇಬ್ಬರು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಸಮುದ್ರಪಾಲಾಗಿರುವ ಘಟನೆ ಇಂದು ಮಧ್ಯಾಹ್ನ ವೇಳೆ ಉಳ್ಳಾಲದ ಸೋಮೇಶ್ವರದಲ್ಲಿ ನಡೆದಿದೆ.

Advertisement

ಮಂಜೇಶ್ವರದ ಕುಂಜತ್ತೂರು ಅಡ್ಕ ನಿವಾಸಿ ಶೇಖರ ಎಂಬವರ ಪುತ್ರ ಯೆಶ್ವಿತ್ (18), ಕುಂಜತ್ತೂರು ಮಜಲ್ ನಿವಾಸಿ ಜಯೇಂದ್ರ ಎಂಬವರ ಪುತ್ರ ಯುವರಾಜ್ (18) ಸಮುದ್ರಪಾಲಾದವರು.

ಇಬ್ಬರು ಸಮೀಪದ ಸೋಮೇಶ್ವರ ಪರಿಜ್ಞಾನ ಪಿಯುಸಿ ಕಾಲೇಜಿನ ದ್ವಿತೀಯ ವರ್ಷ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾಗಿದ್ದಾರೆ. ಕಾಲೇಜು ಮುಗಿಸಿ ಮಧ್ಯಾಹ್ನ ಬಳಿಕ ಸಮುದ್ರ ವಿಹಾರಕ್ಕೆಂದು ತೆರಳಿದ್ದರು. ಈ ವೇಳೆ ಓರ್ವ ವಿದ್ಯಾರ್ಥಿ ಸಮುದ್ರದ ಅಲೆಗಳ ನಡುವೆ ಸಿಲುಕಿದರೆ, ಇನ್ನೋರ್ವ ವಿದ್ಯಾರ್ಥಿ ಆತನನ್ನು ಹಿಡಿಯಲು ಮುಂದಾಗುತ್ತಿದ್ದಂತೆ ಇಬ್ಬರು ಅಲೆಗಳ ನಡುವೆ ಸಿಲುಕಿ ನಾಪತ್ತೆಯಾಗಿದ್ದಾರೆ. ಸ್ಥಳಕ್ಕೆ ಉಳ್ಳಾಲ ಠಾಣಾಧಿಕಾರಿ ಹೆಚ್.ಎನ್ ಬಾಲಕೃಷ್ಣ ಭೇಟಿ ನೀಡಿದ್ದಾರೆ.

Advertisement

Advertisement
Tags :
LatestNewsNewsKannadaಕಾಲೇಜು ವಿದ್ಯಾರ್ಥಿಮಂಗಳೂರು
Advertisement
Next Article