ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೃತಪಟ್ಟ ಕೆಎಸ್ಆರ್‌ಟಿಸಿ ನೌಕರರ ಕುಟುಂಬಕ್ಕೆ ಪರಿಹಾರ ವಿತರಣೆ

ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು.
04:51 PM Jan 01, 2024 IST | Ashika S

ಬೆಂಗಳೂರು: ಅಪಘಾತದಲ್ಲಿ ಮೃತಪಟ್ಟ ಕೆಎಸ್​ಆರ್​ಟಿಸಿ ನೌಕರರ ಕುಟುಂಬದ ಸದಸ್ಯರನ್ನು ಹೊಸ ವರ್ಷದ ಅಂಗವಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಗೌರವಿಸಿದರು. ಅಲ್ಲದೆ, ಅಪಘಾತದಲ್ಲಿ ಮೃತಪಟ್ಟ ಮೂವರು ಸಿಬ್ಬಂದಿಯ ಅವಲಂಬಿತ ಕುಟುಂಬಕ್ಕೆ ತಲಾ 1 ಕೋಟಿ ರೂ. ಪರಿಹಾರ ವಿತರಣೆ ಮಾಡಿದರು.

Advertisement

ಕಳೆದ ಒಂದು ವರ್ಷದಲ್ಲಿ ಅಪಘಾತದಲ್ಲಿ ಮೃತಪಟ್ಟಿದ್ದ ಒಟ್ಟು 12 ಸಿಬ್ಬಂದಿಯ ಅವಲಂಬಿತರಿಗೆ ತಲಾ 1 ಕೋಟಿ ರೂ. ಪರಿಹಾರದ ಮೊತ್ತವನ್ನು ಪಾವತಿಸಲಾಗಿದೆ.

ಪುತ್ತೂರು ವಿಭಾಗದ ಧರ್ಮಸ್ಥಳ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಅಶೋಕ್ ಕುಮಾರ್,ಮೈಸೂರು ವಿಭಾಗದ ವಿಜಯನಗರ ಘಟಕದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ ಬಿ.ಎಂ ಪುಟ್ಟಸ್ವಾಮಿ ಹಾಗು ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-5ರಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಚಾಲಕ-ಕಂ-ನಿರ್ವಾಹಕ ರಮೇಶ ಜಿ. ಅವರು ಮೃತಪಟ್ಟವರು.

Advertisement

ಮೃತ ಅವಲಂಬಿತರ ಕುಟುಂಬದವರಿಗೆ ಸೀರೆ ಮತ್ತು ಸಿಹಿಯನ್ನು ನೀಡಿ ಗೌರವಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ರಾಮಲಿಂಗಾರೆಡ್ಡಿ, ಮನೆಯ ಸದಸ್ಯನನ್ನು ಕಳೆದುಕೊಂಡ ಕುಟುಂಬದವರಿಗೆ ಯಾವ ರೀತಿಯಿಂದಲೂ ನಷ್ಟ ಭರಿಸಲು ಸಾಧ್ಯವಿಲ್ಲ. ಆದರೆ ಆರ್ಥಿಕವಾಗಿ ಅವರಿಗೆ ಶಕ್ತಿ ಮತ್ತು ಭದ್ರತೆಯನ್ನು ಒದಗಿಸುವ ಜವಾಬ್ದಾರಿಯನ್ನು ನಾವು ಮಾಡುತ್ತಿದ್ದೇವೆ. ಕೋಟಿ ಹಣದಿಂದ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ, ಮನೆ ಮಾಡಿಕೊಂಡು ಯಾರನ್ನು ಅವಲಂಬಿಸದೆ ಬದುಕು‌ ನಡೆಸಬಹುದಾಗಿದೆ ಎಂದರು.

ಪರಿಹಾರ ವಿತರಣೆ ಹಾಗೂ ಗೌರವ ಸಲ್ಲಿಕೆ ಸಮಾರಂಭದಲ್ಲಿ ಕೆಎಸ್​ಆರ್​ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ನಿರ್ದೇಶಕರು (ಸಿ ಮತ್ತು ಜಾ) ಡಾ. ನಂದಿನಿ ದೇವಿ ಕೆ., ಅಪಘಾತದಲ್ಲಿ ಮೃತಪಟ್ಟ ಸಿಬ್ಬಂದಿಗಳ ಕುಟುಂಬ ವರ್ಗ, ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಹಾಜರಿದ್ದರು.

Advertisement
Tags :
LatestNewsNewsKannadaಅಪಘಾತಕುಟುಂಬಕೆಎಸ್‌ಆರ್‌ಟಿಸಿನೌಕರಸದಸ್ಯ
Advertisement
Next Article