ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೃತ ಅಭಿಮಾನಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ತಲುಪಿಸಿದ ನಟ ಯಶ್​

ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್​ ಅವರ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟ ಅಭಿಮಾನಿಗಳು ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ  ನಟ ಯಶ್ ಪರಿಹಾರ ನೀಡಿದ್ದು, ಈ ಚೆಕ್ ಅನ್ನು​ ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರು ತಮ್ಮ ಮಕ್ಕಳನ್ನು ನೆನೆದು ದುಃಖಿತರಾದರು.
01:43 PM Jan 17, 2024 IST | Gayathri SG

ಸ್ಯಾಂಡಲ್ವುಡ್ ಸ್ಟಾರ್ ನಟ ಯಶ್​ ಅವರ ಜನ್ಮದಿನದ ಹಿನ್ನಲೆಯಲ್ಲಿ ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ಸ್ಪರ್ಶಿಸಿ ಮೃತಪಟ್ಟ ಅಭಿಮಾನಿಗಳು ಮುರಳಿ, ನವೀನ್​ ಮತ್ತು ಹನುಮಂತ ಅವರ ಕುಟುಂಬದವರಿಗೆ  ನಟ ಯಶ್ ಪರಿಹಾರ ನೀಡಿದ್ದು, ಈ ಚೆಕ್ ಅನ್ನು​ ಯಶ್ ಆಪ್ತರು ಗದಗ ಜಿಲ್ಲೆಯ ಸೊರಣಗಿ ಗ್ರಾಮಕ್ಕೆ ತೆರಳಿ ಪ್ರತಿ ಕುಟುಂಬಕ್ಕೆ ತಲಾ ಐದು ಲಕ್ಷ ರೂಪಾಯಿ ಚೆಕ್​ ನೀಡಿದ್ದಾರೆ. ಈ ವೇಳೆ ಕುಟುಂಬಸ್ಥರು ತಮ್ಮ ಮಕ್ಕಳನ್ನು ನೆನೆದು ದುಃಖಿತರಾದರು.

Advertisement

ಗದಗ ಜಿಲ್ಲೆಯ ಸೊರಣಗಿ ಗ್ರಾಮದ ಅಭಿಮಾನಿಗಳು ಈ ಬಾರಿ ತಮ್ಮ ನೆಚ್ಚಿನ ನಟ ಯಶ್ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಆಚರಿಸಲು ಬ್ಯಾನರ್​ ಕಟ್ಟುವಾಗ ವಿದ್ಯುತ್​ ತಂತಿ ತಗುಲಿದ್ದರಿಂದ ಮುರಳಿ, ನವೀನ್​ ಮತ್ತು ಹನುಮಂತ ಮೃತಪಟ್ಟಿದ್ದರು. ಅಭಿಮಾನಿಗಳ ಸಾವಿನ ಸುದ್ದಿ ತಿಳಿದು ಯಶ್​ ಅವರು ಕಂಬನಿ ಮಿಡಿದರು. ಮರುದಿನ ಅವರು ಸೊರಣಗಿ ಗ್ರಾಮಕ್ಕೆ ಭೇಟಿ ನೀಡಿದ್ದರು. ಮೃತರ ಮನೆಗಳಿಗೆ ತೆರಳಿ, ಅವರ ಕುಟುಂಬದವರಿಗೆ ಸಾಂತ್ವನ ಹೇಳಿದ್ದರು. ಈ ವೇಳೆ ಅವರಿಗೆ ಪರಿಹಾರ ಹಣದ ಬಗ್ಗೆ ಪ್ರಶ್ನೆ ಮಾಡಲಾಗಿತ್ತು. ತಮ್ಮ ಕೈಲಾದ ಸಹಾಯ ಮಾಡುವುದಾಗಿ ಯಶ್​ ತಿಳಿಸಿದ್ದರು. ಈಗ ಅವರು ಮೃತರ ಕುಟುಂಬಕ್ಕೆ ತಲಾ 5 ಲಕ್ಷ ರೂಪಾಯಿ ನೀಡಿದ್ದಾರೆ.

Advertisement
Advertisement
Tags :
FANSLatestNewsNewsKannadaನಟ ಯಶ್‌
Advertisement
Next Article