For the best experience, open
https://m.newskannada.com
on your mobile browser.
Advertisement

ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.
07:00 PM Apr 29, 2024 IST | Nisarga K
ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು
ʻಮಹಾನಟಿ’ ತಂಡದ ವಿರುದ್ಧ ದೂರು ದಾಖಲು..!

ಬೆಂಗಳೂರು: ಕಿರುತೆರೆಯ ಖ್ಯಾತ ನಿರೂಪಕಿ,ತುಳುನಾಡ ಕುವರಿ ಅನುಶ್ರೀ, ರಮೇಶ್​ ಅರವಿಂದ್, ಪ್ರೇಮಾ ಅವರುಗಳ ವಿರುದ್ದ ಪ್ರಕರಣ ದಾಖಲಾಗಿದೆ.

Advertisement

ಖಾಸಾಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಹಾನಟಿ’ ರಿಯಾಲಿಟಿ ಶೋ ದಲ್ಲಿ ಬಳಕೆ ಆದ ಸಾಲಿನ ಕುರಿತು ಅಪಸ್ವರ ಕೇಳಿ ಬಂದಿದೆ. ಈ ಶೋನಲ್ಲಿ ರಮೇಶ್​ ಅರವಿಂದ್, ಪ್ರೇಮಾ ಮೊದಲಾದವರು ಜಡ್ಜ್ ಸ್ಥಾನದಲ್ಲಿದ್ದರೆ, ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ಈ ಶೋನಲ್ಲಿ ಸ್ಪರ್ಧಿಯೊಬ್ಬರು ಆ್ಯಕ್ಟಿಂಗ್ ಮಾಡುವಾಗ ಬಳಕೆ ಮಾಡಿದ ಶಬ್ದ ಚರ್ಚೆ ಹುಟ್ಟುಹಾಕಿದೆ.

‘ಮೆಕ್ಯಾನಿಕ್​ನ ಮದುವೆ ಆದರೆ ಗ್ರೀಸ್ ತಿಂದು ಬದುಕಬೇಕಾಗುತ್ತದೆ..’ ಎನ್ನುವ ವಾಕ್ಯ ಬಳಕೆ ಆಗಿದೆ. ಇದು ಮೆಕ್ಯಾನಿಕ್​ ಕೆಲಸ ಮಾಡುವವರ ಭಾವನೆಗೆ ಧಕ್ಕೆ ಉಂಟು ಮಾಡಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಲಾಗಿದೆ.

Advertisement

ಚಿಕ್ಕನಾಯಕನಹಳ್ಳಿಯ ಫ್ರೆಂಡ್ಸ್ ದ್ವಿಚಕ್ರವಾಹನ ವರ್ಕ್‌ಶಾಪ್ ಮಾಲೀಕರು ಮತ್ತು ತಂತ್ರಜ್ಞರ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ದೂರು ದಾಖಲು ಮಾಡಿದ್ದಾರೆ. ಶ್ರಮಿಕ ವರ್ಗದ ಬಗ್ಗೆ ರಿಯಾಲಿಟಿ ಶೋಗಳಲ್ಲಿ ಈ ರೀತಿಯ ಕುಹಕ ಸರಿ ಅಲ್ಲ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ತಕ್ಷಣಕ್ಕೆ ವಾಹಿನಿಯವರು ಕ್ಷಮೆ ಕೇಳಬೇಕು ಎನ್ನುವ ಆಗ್ರಹ ಕೂಡ ಕೇಳಿ ಬಂದಿದೆ.

Advertisement
Tags :
Advertisement