ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೋದಿ ವಿರುದ್ಧ ಶಿವರಾಜ್ ತಂಗಡಗಿ ಹೇಳಿಕೆ: ಚುನಾವಣಾ ಆಯೋಗಕ್ಕೆ ದೂರು

ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ವಿರುದ್ಧ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
10:55 PM Mar 25, 2024 IST | Ashika S

ಬೆಂಗಳೂರು:  ಯುವಕರು ಮೋದಿ.. ಮೋದಿ.. ಎಂದರೆ ಕಪಾಳಕ್ಕೆ ಹೊಡಿಯಬೇಕು” ಎನ್ನುವ ಸಚಿವ ಶಿವರಾಜ್ ತಂಗಡಗಿ ಹೇಳಿಕೆ ವಿರುದ್ಧ ರಾಜ್ಯ ಬಿಜೆಪಿ ತಂಗಡಗಿ ವಿರುದ್ಧ ಕ್ರಮಕೈಗೊಳ್ಳುವಂತೆ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

Advertisement

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ ರಾಜೀವ್, ವಿಧಾನಪರಿಷತ್ ಸದಸ್ಯ ಡಿ.ಎಸ್. ಅರುಣ್, ರಾಜ್ಯ ವಕ್ತಾರ ಹೆಚ್. ವೆಂಕಟೇಶ್ ದೊಡ್ಡೇರಿ, ಕಾನೂನು ಪ್ರಕೋಷ್ಟದ ರಾಜ್ಯ ಸಂಚಾಲಕ ವಸಂತ್ ಕುಮಾರ್ ಒಳಗೊಂಡ ಬಿಜೆಪಿ ನಿಯೋಗ ಇಂದು(ಮಾರ್ಚ್ 25) ಚುನಾವಣೆ ಆಯೋಗಕ್ಕೆ ದೂರು ನೀಡಿದರು.

 ಹೇಳಿದ್ದೇನು?: ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಏರ್ಪಡಿಸಲಾಗಿದ್ದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಿವರಾಜ್‌ ತಂಗಡಗಿ, ಯುವಕರಿಗೆ ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುತ್ತೇನೆ ಎಂದಿದ್ದರು. ಹಾಗೆ ನೋಡಿದರೆ 10 ವರ್ಷದಲ್ಲಿ 20 ಕೋಟಿ ಉದ್ಯೋಗ ನೀಡಬೇಕಿತ್ತು. ನೀಡಿದ್ದಾರಾ? ಇನ್ನೂ ಯುವಕರು, ವಿದ್ಯಾರ್ಥಿಗಳು ಮೋದಿ ಮೋದಿ ಎನ್ನುತ್ತಾರೆ. ಸುಳ್ಳು ಹೇಳಿ ಅಧಿಕಾರಕ್ಕೆ ಬಂದಿದ್ದಾರೆ. ಇನ್ನೂ 5-10 ವರ್ಷ ಸುಳ್ಳು ಹೇಳುತ್ತಾರೆ. ಈ ಸುಳ್ಳು ಕೇಳಿಕೊಂಡು ಹೋಗಬೇಕಾ? ಎಂದು ಪ್ರಶ್ನೆ ಮಾಡಿದ್ದರು.

Advertisement

ನಾವು ಮೋದಿ ಮೋದಿ ಎನ್ನುತ್ತೇವೆ ನಮಗೆ ಹೊಡೆಯಿರಿ ಬನ್ನಿ ಎಂದು ಅಭಿಯಾನ ಮಾದರಿಯಲ್ಲಿ ಪೋಸ್ಟರ್​ ಅನ್ನು ಸಾಮಾಜಿ ಜಾಲತಾಣಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ.

Advertisement
Tags :
bengaluruCOMPLAINTLatestNewsNewsKarnatakaPM MODI
Advertisement
Next Article