ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಎಚ್‌ ಡಿಕೆ ವಿರುದ್ಧ ಲೋಕಾಯುಕ್ತಕ್ಕೆ ದೂರು

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಆಸ್ತಿ ವಿವರವನ್ನು ಸಮರ್ಪಕವಾಗಿ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.
03:08 PM Dec 04, 2023 IST | Ashika S

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಮ್ಮ ಆಸ್ತಿ ವಿವರವನ್ನು ಸಮರ್ಪಕವಾಗಿ ನೀಡದೆ ವಂಚಿಸಿದ್ದಾರೆ ಎಂದು ಆರೋಪಿಸಿ ಲೋಕಾಯುಕ್ತಕ್ಕೆ ದೂರು ನೀಡಲಾಗಿದೆ.

Advertisement

ಸಾಮಾಜಿಕ ಹೋರಾಟಗಾರ ಸಿ.ಎಸ್​​.ಸಿದ್ದರಾಜು ಎನ್ನುವರು ದೂರು ನೀಡಿದ್ದು, 2004 ರ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕೇತನಗಾನಹಳ್ಳಿಯಲ್ಲಿ 24 ಎಕರೆ ಜಮೀನಿರುವ ಬಗ್ಗೆ ಉಲ್ಲೇಖಿಸಿದ್ದಾರೆ. ವಿವಿಧ ಸರ್ವೇ ನಂಬರ್ ಗಳಲ್ಲಿ 1,2,3,4 ಎಕರೆ ಜಮೀನು ಖರೀದಿ ಮಾಡಿರುವುದಾಗಿ ಹೇಳಿದ್ದಾರೆ.

ಹಾಗೆ ತನ್ನ ಚಿಕ್ಕಮ್ಮ ಸಾವಿತ್ರಮ್ಮರಿಂದ ದಾನ ಪಡೆದಿರುವುದಾಗಿಯೂ ಹೇಳಿದ್ದಾರೆ. ಸಾವಿತ್ರಮ್ಮನವರಿಗೆ ಕುಮಾರಸ್ವಾಮಿ ಬೇನಾಮಿಯಾಗಿದ್ದಾರಾ ? ಅಥವಾ ತಾಯಿಯ ಸಹೋದರಿಯ ಆದಾಯದ ಮೂಲ ಯಾವುದು? ಎಂದು ಪ್ರಶ್ನಿಸಿದ್ದಾರೆ.

Advertisement

2008 ಹಾಗೂ 2018ರ ಚುನಾವಣೆಯ ಅಫಿಡವಿಟ್ ನಲ್ಲಿ ಬೆಂಗಳೂರಿನ ಜೆಪಿ ನಗರದ ಮನೆಯನ್ನ ಖರೀದಿ ಮಾಡಿದ್ದಾಗಿ ಉಲ್ಲೇಖಿಸಿದ್ದಾರೆ. 2023ರ ಚುನಾವಣೆಯಲ್ಲಿ ಹೆಚ್ ಡಿ ಕುಮಾರಸ್ವಾಮಿ ಅದೇ ಮನೆಯನ್ನ 1995ರಲ್ಲಿ ಖರೀದಿಸಿರುವ ಬಗ್ಗೆ ಮಾಹಿತಿ ಇದೆ. ಇನ್ನು ಅನಿತಾ ಕುಮಾರಸ್ವಾಮಿಯವರು ಕುಪೇಂದ್ರ ರೆಡ್ಡಿಯವರಿಂದ 9 ಕೋಟಿ 50 ಲಕ್ಷ ಸಾಲಪಡೆರುವುದಾಗಿ ಹೇಳಿದ್ದಾರೆ.

ಆದ್ರೆ, 2022 ರಲ್ಲಿ ಕುಪೇಂದ್ರರೆಡ್ಡಿಯವರು ರಾಜ್ಯಸಭಾ ಚುನಾವಣೆಗೆ ಸ್ಪರ್ಧಿಸಿದ್ದಾಗ ಚೆನ್ನಾಂಬಿಕ ಫಿಲ್ಮ್ ಸಂಸ್ಥೆಗೆ 4 ಕೋಟಿ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ. ಆದರೆ ಸಮರ್ಪಕ ಮಾಹಿತಿ ಒದಗಿಸದೇ ವಂಚಿಸಿದ್ದಾರೆ ಎಂದು ಆರೋಪಿಸಿದ್ದಾರೆ.

Advertisement
Tags :
LatetsNewsNewsKannadaಆಸ್ತಿ ವಿವರಕುಮಾರಸ್ವಾಮಿಮಾಜಿ ಮುಖ್ಯಮಂತ್ರಿಲೋಕಾಯುಕ್ತ
Advertisement
Next Article