ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆತ್ತಲೆಗೊಳಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಶಿಕ್ಷಕನ ವಿರುದ್ಧ ದೂರು ದಾಖಲು

ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್​ ಖಾಸಗಿ ಶಾಲೆಯಲ್ಲಿ ನಡೆದಿದೆ.
12:23 PM Dec 19, 2023 IST | Ashika S

ಬೀದರ್: ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ ಮಾಡಿದ ಆರೋಪದ ಮೇಲೆ ಶಿಕ್ಷಕನನ್ನು ಪೋಕ್ಸೋ ಕಾಯ್ದೆಯಡಿ ಪೊಲೀಸರು ಬಂಧಿಸಿದ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್​ ಖಾಸಗಿ ಶಾಲೆಯಲ್ಲಿ ನಡೆದಿದೆ.

Advertisement

ದೈಹಿಕ ಶಿಕ್ಷಕ ರಮೇಶ್  ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ ಶಿಕ್ಷಕ.

ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಾರೆಂಬ ನೆಪವೊಡ್ಡಿ ಶಿಕ್ಷಕ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿದ್ದ.  ಶಿಕ್ಷಕನ ವಿರುದ್ಧ ಹುಮ್ನಾಬಾದ್​ ಠಾಣೆಯಲ್ಲಿ ಪೋಷಕರು ದೂರು ದಾಖಲಿಸಿದ್ದು, ಪೋಷಕರ ದೂರು ಆಧರಿಸಿ ಶಿಕ್ಷಕನನ್ನು ಬಂಧಿಸಲಾಗಿದೆ.

Advertisement

9ನೇ ಮತ್ತು 10ನೇ ತರಗತಿಯ ಮಕ್ಕಳು ಗಲಾಟೆ ಮಾಡುತ್ತಿದ್ದಾರೆ ಎಂದು ಬಟ್ಟೆ ಬಿಚ್ಚಿಸಿ ಬೆತ್ತಲೆ ಮಾಡಿ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ಮಾಡಿದ್ದರು. ಅಲ್ಲದೆ ಯಾರಿಗಾದರು ಈ ವಿಚಾರ ಹೇಳಿದರೆ ನಿಮ್ಮನ್ನು ಸುಮ್ಮನೆ ಬಿಡುವುದಿಲ್ಲ ಎಂದು ಬೆದರಿಕೆ ಕೂಡ ಹಾಕಿದ್ದರು. ಮಕ್ಕಳಿಗೆ ಆದ ಗಾಯಗಳನ್ನು ಗಮನಿಸಿ ಪೋಷಕರು ಠಾಣೆಯಲ್ಲಿ ದೂರು ದಾಖಲಿಸಿದ್ದು ಶಿಕ್ಷಕನನ್ನು ಅರೆಸ್ಟ್ ಮಾಡಲಾಗಿದೆ.

Advertisement
Tags :
LatetsNewsNewsKannadaಆರೋಪಖಾಸಗಿ ಶಾಲೆಪೋಕ್ಸೋ ಕಾಯ್ದೆಬೆತ್ತಲೆವಿದ್ಯಾರ್ಥಿಹುಮ್ನಾಬಾದ್
Advertisement
Next Article