For the best experience, open
https://m.newskannada.com
on your mobile browser.
Advertisement

ರಾಜ್ಯಾದ್ಯಂತ 15.78 ಕೋಟಿ ಹಣ, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿದ್ದಾರೆ.
09:36 PM Mar 23, 2024 IST | Chaitra Kulal
ರಾಜ್ಯಾದ್ಯಂತ 15 78 ಕೋಟಿ ಹಣ  1 27 ಕೋಟಿ ರೂ  ಮೌಲ್ಯದ ಚಿನ್ನಾಭರಣ ಜಪ್ತಿ

ಬೆಂಗಳೂರು: ಲೋಕಸಭೆ ಚುನಾವಣಾ ನೀತಿ ಸಂಹಿತೆ ಜಾರಿ ಹಿನ್ನೆಲೆ ರಾಜ್ಯಾದ್ಯಂತ ಪೊಲೀಸರು ತನಿಖೆ ನಡೆಸುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಚೆಕ್‌ಪೋಸ್ಟ್‌ ಸ್ಥಾಪಿಸಿದ್ದಾರೆ.

Advertisement

ಅಕ್ರಮ ವಸ್ತುಗಳ ಸಾಗಾಟ ತಡೆಗೆ ಪೊಲೀಸರು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, ಈ ವೇಳೆ ರಾಜ್ಯಾದ್ಯಂತ ವಿವಿಧ ಜಿಲ್ಲೆಗಳಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಒಟ್ಟು 15.78 ಕೋಟಿ ರೂ. ನಗದು, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನ ಜಪ್ತಿ ಮಾಡಲಾಗಿದೆ.

ರಾಜ್ಯದಲ್ಲಿ ಈವರೆಗೆ 15.78 ಕೋಟಿ ರೂ. ನಗದು, 23 ಕೋಟಿ ರೂ. ಮೌಲ್ಯದ ಮದ್ಯ, 65 ಲಕ್ಷ ರೂ. ಮೌಲ್ಯದ ಡ್ರಗ್ಸ್, 1.27 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿಯಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ.

Advertisement

Advertisement
Tags :
Advertisement