For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆ: 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ 4 ರಾಜ್ಯಗಳ 43 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.
10:08 PM Mar 12, 2024 IST | Ashitha S
ಲೋಕಸಭಾ ಚುನಾವಣೆ  2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಚುನಾವಣೆ ಘೋಷಣೆಗೂ ಮುನ್ನ ಕಾಂಗ್ರೆಸ್ ಪಕ್ಷ ತನ್ನ 2ನೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದೆ. 2ನೇ ಪಟ್ಟಿಯಲ್ಲಿ 4 ರಾಜ್ಯಗಳ 43 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನ ಆಯ್ಕೆ ಮಾಡಲಾಗಿದೆ.

Advertisement

ದೆಹಲಿಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಅವರು ಸುದ್ದಿಗೋಷ್ಟಿ ನಡೆಸಿದರು. ಈ ವೇಳೆ ಅಸ್ಸಾಂ, ಗುಜರಾತ್, ಮಧ್ಯಪ್ರದೇಶ, ರಾಜಸ್ಥಾನದ 43 ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟ ಮಾಡಿದರು. 2ನೇ ಪಟ್ಟಿಯಲ್ಲಿ ಕರ್ನಾಟಕದ ಯಾವ ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್ ಹೈಕಮಾಂಡ್ ಪರಿಗಣಿಸಿಲ್ಲ. ಕಾಂಗ್ರೆಸ್ ಬಿಡುಗಡೆ ಮಾಡಿರುವ 2ನೇ ಪಟ್ಟಿಯಲ್ಲಿ ಪ್ರಮುಖವಾಗ ಮಾಜಿ ಸಿಎಂ ಪುತ್ರರಿಗೆ ಮಣೆ ಹಾಕಲಾಗಿದೆ.

ಮಧ್ಯಪ್ರದೇಶ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಮಗ ನಕುಲ್ ಅವರಿಗೆ ಛಿಂದ್ವಾರಾ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಅವಕಾಶ ನೀಡಲಾಗಿದೆ. ರಾಜಸ್ಥಾನದ ಜಾಲೋರ್‌ನಿಂದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರ ಪುತ್ರ ವೈಭವ್ ಗೆಹ್ಲೋಟ್ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ.

Advertisement

ಕಳೆದ ಮಾರ್ಚ್ 8 ರಂದು ಕಾಂಗ್ರೆಸ್ 39 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿತ್ತು. 39 ಪಟ್ಟಿಯಲ್ಲಿ ಕರ್ನಾಟಕದ 7 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟವಾಗಿತ್ತು. ಮಾರ್ಚ್ 15 ರಂದು ಕಾಂಗ್ರೆಸ್‌ ಮೂರನೇ ಸುತ್ತಿನ ಸಭೆ ನಡೆಸಲಿದ್ದಾರೆ. ಅಂದು ಕರ್ನಾಟಕದ 23 ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚಿಸಲಿದ್ದು, ಅಂದೇ ಅಭ್ಯರ್ಥಿಗಳ ಹೆಸರು ಫೈನಲ್ ಆಗಲಿದೆ.

Advertisement
Tags :
Advertisement