For the best experience, open
https://m.newskannada.com
on your mobile browser.
Advertisement

ದೇಶ ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ : ಶೋಭಾ ಕರಂದ್ಲಾಜೆ

ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಆರೋಪ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್‌ನ ಮೆಂಟಾಲಿಟಿ ಪಾಕಿಸ್ತಾನದ ಪರ ಇದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇದ್ದರೆ ತಕ್ಷಣ ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಅರೆಸ್ಟ್ ಮಾಡಿ ಎಂದು ಒತ್ತಾಯ ಮಾಡಿದರು.
12:39 PM Feb 28, 2024 IST | Nisarga K
ದೇಶ ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ   ಶೋಭಾ ಕರಂದ್ಲಾಜೆ
ದೇಶ ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ.ಶೋಭಾ ಕರಂದ್ಲಾಜೆ

ಉಡುಪಿ: ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಹೇಳಿಕೆ ಆರೋಪ ಕುರಿತು ಉಡುಪಿಯಲ್ಲಿ ಪ್ರತಿಕ್ರಿಯೆ ನೀಡಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು, ಕಾಂಗ್ರೆಸ್‌ನ ಮೆಂಟಾಲಿಟಿ ಪಾಕಿಸ್ತಾನದ ಪರ ಇದೆ ಎಂಬುದು ಇದರಿಂದ ಗೊತ್ತಾಗುತ್ತದೆ. ಸಿದ್ದರಾಮಯ್ಯನವರಿಗೆ ಸಂವಿಧಾನದ ಬಗ್ಗೆ ನಂಬಿಕೆ ಇದ್ದರೆ ತಕ್ಷಣ ಪಾಕಿಸ್ತಾನ ಜಿಂದಾಬಾದ್ ಅಂದವರನ್ನು ಅರೆಸ್ಟ್ ಮಾಡಿ ಎಂದು ಒತ್ತಾಯ ಮಾಡಿದರು.

Advertisement

ರಾಜ್ಯಸಭೆ ಸದಸ್ಯ ನಾಸಿರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾರೆ, ಇದನ್ನು ಪ್ರಶ್ನೆ ಮಾಡಲು ಹೋದ ಪತ್ರಕರ್ತರಿಗೂ ನಾಸೀ‌ರ್ ಹುಸೇನ್‌ ಅವಾಜ್ ಹಾಕಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಇದರ ಹಿಂದೆ ಬಹಳ ದೊಡ್ಡ ಷಡ್ಯಂತ್ರದ ಗುಮಾನಿ ಇದೆ ಎಂದರು. ಭಾರತವನ್ನು ವಿಭಜನೆ ಮಾಡುವ ಮಾತನ್ನು ಕಾಂಗ್ರೆಸ್ ಆಡುತ್ತಿದೆ. ಯಾವುದೇ ಸರ್ಕಾರಕ್ಕೆ ಅಧಿಕಾರ ಶಾಶ್ವತವಲ್ಲ. ದೇಶದಲ್ಲಿ ಗೊಂದಲ ನಿರ್ಮಾಣ ಮಾಡುವ ವ್ಯವಸ್ಥಿತ ಪ್ರಯತ್ನ ನಡೆಯುತ್ತಿದೆ. ಪ್ರಕರಣವನ್ನು ಎನ್​ಐಎ ತನಿಖೆ ಮಾಡಿದರೆ ಸತ್ಯಾಸತ್ಯತೆ ಹೊರಬರಲಿದೆ. ಇದರ ಹಿಂದಿರುವ ಶಕ್ತಿಯನ್ನು ಪೊಲೀಸರು ಪತ್ತೆ ಮಾಡಬೇಕು. ರಾಜ್ಯದ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಆರೋಪಿಯನ್ನ ಬಂಧಿಸುವಂತೆ ಕೇಳಿಕೊಂಡಿದ್ದೇನೆ ಎಂದು ತಿಳಿಸಿದರು.

Advertisement

Advertisement
Tags :
Advertisement