ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಲೋಕಸಭೆ ಚುನಾವಣೆ ಫಲಿತಾಂಶದ ಬಳಿಕ ಕಾಂಗ್ರೆಸ್ ಸರಕಾರ ಪತನ: ಶಾಸಕ ಯಶ್ ಪಾಲ್ ಸುವರ್ಣ

ಕಾಂಗ್ರೆಸ್ ಸರ್ಕಾರ ಜನರ ಮನ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ನ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಸರಕಾರದ ಪತನಕ್ಕೆ ಮುಹೂರ್ತ ನಿಗದಿಯಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.
06:01 PM May 13, 2024 IST | Chaitra Kulal

ಉಡುಪಿ: ಕಾಂಗ್ರೆಸ್ ಸರ್ಕಾರ ಜನರ ಮನ ಗೆಲ್ಲುವಲ್ಲಿ ವಿಫಲವಾಗಿದೆ. ಕಾಂಗ್ರೆಸ್‌ ನ ಶಾಸಕರೇ ಸರ್ಕಾರದ ವಿರುದ್ಧ ಬೇಸರಗೊಂಡಿದ್ದಾರೆ. ಲೋಕಸಭಾ ಚುನಾವಣೆಯ ಫಲಿತಾಂಶ ಹೊರ ಬರುತ್ತಿದ್ದಂತೆ ಕಾಂಗ್ರೆಸ್ ಸರಕಾರದ ಪತನಕ್ಕೆ ಮುಹೂರ್ತ ನಿಗದಿಯಾಗುತ್ತದೆ ಎಂದು ಶಾಸಕ ಯಶ್ ಪಾಲ್ ಸುವರ್ಣ ಹೇಳಿದರು.

Advertisement

ಕರ್ನಾಟಕದ ಕಾಂಗ್ರೆಸ್ ಸರ್ಕಾರ ಉರುಳುತ್ತೆ ಎಂಬ ಮಹಾರಾಷ್ಟ್ರ ಸಿಎಂ ಏಕನಾಥ ಶಿಂಧೆ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಅವರು, ಅಭಿವೃದ್ಧಿಗೆ ಅನುದಾನ ಇಲ್ಲದೆ ಶಾಸಕರು ಜನಕ್ಕೆ ಮುಖ ತೋರಿಸದ ಪರಿಸ್ಥಿತಿ ಇದೆ. ಕಾಂಗ್ರೆಸ್‌ ನ ಶಾಸಕರಿಗೇ ಬಹಳ ಮುಜುಗರ ಆಗುತ್ತಿದೆ.

ಈ ಸರ್ಕಾರವಿದ್ದರೆ ಗಂಡಾಂತರ ಎಂದು ಎಲ್ಲಾ ಶಾಸಕರು ಹೇಳುತ್ತಿದ್ದಾರೆ. ಜನರಿಗೆ ಅಭಿವೃದ್ಧಿ ಬೇಕು ಸುಳ್ಳು ಭರವಸೆ ಬೇಡ ಎಂಬ ಅಭಿಪ್ರಾಯ ಎಲ್ಲೆಡೆಯಿಂದ ಕೇಳಿ ಬರುತ್ತಿದೆ. ಕೇಂದ್ರದ ಮಾದರಿಯಲ್ಲೇ ರಾಜ್ಯದಲ್ಲಿ ಅಭಿವೃದ್ಧಿ ಆಗಬೇಕೆಂದು ಜನ ಬಯಸಿದ್ದಾರೆ.

Advertisement

ಹೀಗಾಗಿ ಡಿಕೆಶಿ ಸಿದ್ಧರಾಮಯ್ಯನನ್ನುರನ್ನು ಕೆಳಗಿಳಿಸುತ್ತಾರೋ ಅಥವಾ ಸಿದ್ದರಾಮಯ್ಯ ಡಿಕೆಶಿ ಅವರನ್ನು ಕೆಳಗಿಳಿಸುತ್ತಾರೆ ಎಂಬ ಚರ್ಚೆ ಕುತೂಹಲ ಸೃಷ್ಟಿಸಿದೆ. ಇಬ್ಬರು ನಾಯಕರ ಬಗ್ಗೆ ಜನ ಬೇಸರದಿಂದ ಮಾತನಾಡುತ್ತಿದ್ದಾರೆ. ಫಲಿತಾಂಶ ಬರುತ್ತಿದ್ದಂತೆ ಈ ಬಗ್ಗೆ ಗಂಭೀರ ಚರ್ಚೆ ಬೆಳವಣಿಗೆ ನಡೆಯಲಿದೆ ಎಂದರು.

Advertisement
Tags :
2024 LOKSABHA ELECTIONGovtUDUPIYash Pal Suvarna
Advertisement
Next Article