ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ಬಿಜೆಪಿ ಸೇರ್ಪಡೆ

ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ  ಸಮ್ಮುಖದಲ್ಲಿ  ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ.
03:17 PM Mar 02, 2024 IST | Ashika S

ಬೆಂಗಳೂರು: ಕಾಂಗ್ರೆಸ್ ಮುಖಂಡ ಮನೋಹರ್ ತಹಶೀಲ್ದಾರ್​ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ವಿಪಕ್ಷ ನಾಯಕ ಆರ್.ಅಶೋಕ್, ಮಾಜಿ ಸಿಎಂ ಬೊಮ್ಮಾಯಿ  ಸಮ್ಮುಖದಲ್ಲಿ  ಶನಿವಾರ​ ಬಿಜೆಪಿ ಸೇರ್ಪಡೆ ಆಗಿದ್ದಾರೆ.

Advertisement

ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ಬಾವುಟ ನೀಡಿ ಬರಮಾಡಿಕೊಂಡಿದ್ದಾರೆ.

50 ವರ್ಷಗಳಿಂದ ಕಾಂಗ್ರೆಸ್​ನಲ್ಲಿದ್ದ ಅವರು ಕಳೆದ ಚುನಾವಣೆಯಲ್ಲಿ ಟಿಕೆಟ್‌ ಕೈತಪ್ಪಿದ್ದರಿಂದ ಜೆಡಿಎಸ್‌ ಸೇರ್ಪಡೆಗೊಂಡಿದ್ದರು. ಇದೀಗ ಬಿಜೆಪಿ ಸೇರ್ಪಡೆ ಆಗಿದ್ದಾರೆ.

Advertisement

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರೊಂದಿಗೆ ಮಾತುಕತೆ ಬಳಿಕ ಮನೋಹರ್‌ ತಹಸೀಲ್ದಾರ್‌ ಅವರು ಜೆಡಿಎಸ್‌ ತೊರೆದು ಬಿಜೆಪಿ ಸೇರ್ಪಡೆ ಆಗಿದ್ದಾರೆ ಎನ್ನಲಾಗುತ್ತಿದೆ. ಮನೋಹರ್‌ ತಹಸೀಲ್ದಾರ್‌ ಅವರು ನಾಗರಿಕ ಸ್ನೇಹಿ ನಾಯಕರಾಗಿದ್ದಲ್ಲದೆ, ಸಾಕಷ್ಟು ಜನಪ್ರಿಯತೆಯನ್ನು ಹೊಂದಿದ್ದಾರೆ. ಜೊತೆಗೆ ಅವರದ್ದೇ ಆದ ವೋಟ್‌ ಬ್ಯಾಂಕ್‌ ಹೊಂದಿದ್ದಾರೆ. ಹಾಗಾಗಿ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಗೆ ಕರೆತರಲಾಗಿದೆ.

ಈಗಾಗಲೇ ಲೋಕಸಭಾ ಚುನಾವಣಾ ಸಿದ್ಧತೆಯಲ್ಲಿರುವ ಬಿಜೆಪಿ ಆ ಮೂಲಕ ಹಾವೇರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸಲು ಮುಂದಾಗಿದೆ.

ಬಿಜೆಪಿ ಸೇರ್ಪಡೆ ಬಳಿಕ ಮಾತನಾಡಿದ ಮನೋಹರ್ ತಹಶೀಲ್ದಾರ್​, ಹಾವೇರಿಗೆ ಒಳ್ಳೆ ಅಭ್ಯರ್ಥಿ ಬೇಕು ಎನ್ನುವ ಮಾತು ಇದೆ. ಹೀಗಾಗಿ ಬಸವರಾಜ ಬೊಮ್ಮಾಯಿ ಅವರು ಒಳ್ಳೆ ಕೆಲಸ ಮಾಡಿದಾರೆ. ಅವರು ಹಾವೇರಿಯ ಬಿಜೆಪಿ ಅಭ್ಯರ್ಥಿ ಆಗಬೇಕು. ಇದು ಜನರ ಅಭಿಪ್ರಾಯ ನಮ್ಮ ಅಭಿಪ್ರಾಯವೂ ಹೌದು. ನಾವು ಬೊಮ್ಮಾಯಿ ಅವರನ್ನ ಲೋಕಸಭಾ ಸದಸ್ಯರನ್ನಾಗಿ ಮಾಡಿ ಕಳಿಸುತ್ತೇವೆ ಎಂದು ಹೇಳಿದ್ದಾರೆ.

ಎಲ್ಲರೂ ಒಪ್ಪಿದ್ದಕ್ಕೆ ಬಿಜೆಪಿಗೆ ಬಂದಿದ್ದೇನೆ. ಬಸವರಾಜ ಬೊಮ್ಮಾಯಿ ಅವರು ಇರುವಷ್ಟು ಕಾಲ ಅವರೊಂದಿಗೆ ಇರೋಣ ಅಂತ ಬಂದಿದ್ದೇನೆ. ಯಾವುದೇ ಟಿಕೆಟ್‌ಗೆ ಬೇಡಿಕೆ ಇಟ್ಟಿಲ್ಲ. ಪಕ್ಷದಲ್ಲಿ ಗೌರವ ಕೊಡಿ ಅಂತ ಅಷ್ಟೇ ಕೇಳಿದ್ದೇನೆ ಎಂದರು.

Advertisement
Tags :
LatetsNewsNewsKannadaಕಾಂಗ್ರೆಸ್ಬಿಜೆಪಿಮನೋಹರ್ ತಹಶೀಲ್ದಾರ್​
Advertisement
Next Article