For the best experience, open
https://m.newskannada.com
on your mobile browser.
Advertisement

ಬರ ಪರಿಹಾರಕ್ಕಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ʼಕೈʼ ಪ್ರತಿಭಟನೆ

ಬರ ಪರಿಹಾರವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.
12:36 PM Apr 23, 2024 IST | Ashitha S
ಬರ ಪರಿಹಾರಕ್ಕಾಗಿ ಆಗ್ರಹಿಸಿ ಕೇಂದ್ರದ ವಿರುದ್ಧ ʼಕೈʼ ಪ್ರತಿಭಟನೆ

ಬೆಂಗಳೂರು: ಬರ ಪರಿಹಾರವನ್ನು ತಕ್ಷಣ ಜಾರಿಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.

Advertisement

ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಸಿಎಂ ಸಿದ್ದರಾಮಯ್ಯ, ರಣದೀಪ್ ಸುರ್ಜೇವಾಲಾ, ಸಚಿವ ಕೃಷ್ಣಬೈರೇಗೌಡ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದರು.

‘ಕರ್ನಾಟಕಕ್ಕೆ ಮೋದಿ ಕೊಟ್ಟಿದ್ದು ಖಾಲಿ ಚೊಂಬು, ಚೊಂಬೇಶ್ವರ’ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರಗೃಹ ಸಚಿವ ಅಮಿತ್ ಶಾ ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ. ರಾಜ್ಯದ ಬಗ್ಗೆ ಮಲತಾಯಿಧೋರಣೆ ಅನುಸರಿಸಿದ್ದಾರೆ. ಈಗ ಬರ ಪರಿಹಾರ ನೀಡುವುದಾಗಿ ಸುಪ್ರೀಂ ಕೋರ್ಟ್ ಮುಂದೆ ಒಪ್ಪಿಕೊಂಡು ಇನ್ನೂ ಹಣ ಬಿಡುಗಡೆ ಮಾಡಿಲ್ಲ. ತಕ್ಷಣ ಬರ ಪರಿಹಾರ ಬಿಡುಗಡೆ ಮಾಡುವಂತೆ ಒತ್ತಾಯಿಸಿದರು.

Advertisement
Tags :
Advertisement