ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಕಾಂಗ್ರೆಸ್ ಸಮಾವೇಶ: ವಾಹನ ಸಂಚಾರದಲ್ಲಿ ಬದಲಾವಣೆ

ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು (ಫೆ.17) ಕಾಂಗ್ರೆಸ್ ನ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ. 
09:50 AM Feb 17, 2024 IST | Ashika S

ಮಂಗಳೂರು: ಮಂಗಳೂರಿನ ಅಡ್ಯಾರ್ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ಇಂದು (ಫೆ.17) ಕಾಂಗ್ರೆಸ್ ನ ರಾಜ್ಯ ಮಟ್ಟದ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ.  ಎಐಸಿಸಿ ಸೂಚನೆ ಮೇರೆಗೆ ಕೇಸರಿ ಕೋಟೆಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದೆ.

Advertisement

ಸಮಾವೇಶ ನಡೆಯುವ ಅಡ್ಯಾರ್ ಮೈದಾನದ ಬಳಿ ಘನ ವಾಹನಗಳ ಸಂಚಾರದಲ್ಲಿ ಬದಲಾವಣೆ ಮಾಡಲಾಗಿದೆ.

ಉಡುಪಿ ಕಡೆಯಿಂದ ಬೆಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ನಂತೂರು-ಪಂಪ್‌ವೆಲ್-ತೊಕ್ಕೊಟ್ಟು-ಮುಡಿಪು -ಮೆಲ್ಕಾರ್ ಮೂಲಕ ಸಂಚರಿಸುವುದು. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಂಚರಿಸುವ ಘನ ವಾಹನಗಳು ಮೆಲ್ಕಾರ್-ಮುಡಿಪು-ತೊಕ್ಕೊಟ್ಟು-ಪಂಪ್‌ವೆಲ್ ಮೂಲಕ ಸಂಚರಿಸಬೇಕಾಗಿದೆ.

Advertisement

ಕಾರ್ಯಕ್ರಮಕ್ಕೆ ಆಗಮಿಸುವವರ ವಾಹನ ಪಾರ್ಕಿಂಗ್ ಸ್ಥಳಗಳ ವಿವರ:

ಫೆ.17 ರ ಬೆಳಗ್ಗೆ 9 ಗಂಟೆಯಿಂದ ಕಾರ್ಯಕ್ರಮ ಮುಗಿಯುವವರೆಗೆ ವಾಹನ ಸಂಚಾರ ಬದಲಾವಣೆ ಮಾಡಲಾಗಿದೆ.

ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ರಾಜ್ಯ ಉಸ್ತು ವಾರಿ ರಣದೀಪ್ ಸಿಂಗ್ ಸುರ್ಜೆವಾಲ. ಎಲ್ಲಾ ಸಚಿವರು, ಸಂಸದರು, ಶಾಸಕರು, ಪದಾಧಿಕಾರಿಗಳು, ವಿಧಾನಸಭೆ ಅಭ್ಯರ್ಥಿಗಳು, ಆಕಾಂಕ್ಷಿಗಳು, ಎಐಸಿಸಿ, ಕೆಪಿಸಿಸಿ ಸದಸ್ಯರು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಎಲ್ಲಾ ಹಂತದ ಅಧ್ಯಕ್ಷರು ಭಾಗಿಯಾಗಲಿದ್ದಾರೆ.

ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ:

ಕಾಂಗ್ರೆಸ್ ಸಮಾವೇಶ ನಡೆಯುವ ಸ್ಥಳಕ್ಕೆ ಮಾಜಿ ಸಚಿವ ರಮಾನಾಥ ರೈ ಭೇಟಿ ನೀಡಿ ಸಮಾವೇಶದ ಸಿದ್ಧತೆ ಪರಿಶೀಲಿಸಿದರು.

ಇದೆ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು  ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರ ಮತೀಯವಾದಕ್ಕೆ ಪುಷ್ಠಿ ಕೊಡುವ ಕ್ಷೇತ್ರ, ಆ ಕಾರಣಕ್ಕಾಗಿ ಇಲ್ಲಿ ನಿರಂತರವಾಗಿ ಮತೀಯವಾದಿ ಪಕ್ಷ ಇಲ್ಲಿ ಗೆಲ್ಲುತ್ತಿದೆ.ಆದರೆ ಈ ಬಾರಿ ಆ ರೀತಿ ನಡೆಯಲ್ಲ,ಮತೀಯವಾದ ಅನ್ನೋದು ಒಂದು ಸೀಸನಲ್ ಜ್ವರ ಇದ್ದ ಹಾಗೆ ಕಾಲಕ್ರಮೇಣ ಆ ಜ್ವರ ಕಡಿಮೆಯಾಗುತ್ತೆ ಎಂದರು.

ಮತದಾರರನ್ನು ಭಾವನಾತ್ಮಕವಾಗಿ ಸೆಳೆಯುವ ಪ್ರಯತ್ನ ಬಿಜೆಪಿ ಮಾಡುತ್ತಿದೆ. ಆದರೆ ಪ್ರತಿಬಾರಿಯೂ ಈ ತಂತ್ರ ನಡೆಯಲ್ಲ, ಮುಂದಿನ ಲೋಕಸಭಾ ಚುನಾವಣೆಯ ಅಭ್ಯರ್ಥಿಯ ಘೋಷಣೆ ಈ ಸಮಾವೇಶದಲ್ಲಿ ನಡೆಯುವುದಿಲ್ಲ. ಪಕ್ಷದ ಹೈಕಮಾಂಡ್ ಈ ನಿರ್ಧಾರವನ್ನು ತೆಗೆದುಕೊಳ್ಳಲಿದೆ ಸರ್ವೇ ಮೂಲಕ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತದೆ. ನಾನು ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಕಾರ್ಯಕರ್ತ, ಪಕ್ಷ ನನಗೆ ಎಲ್ಲಾ ಅವಕಾಶ ನೀಡಿದೆ,ಈ ಬಾರಿ ಲೋಕಸಭಾ ಚುನಾವಣೆಗೆ ಅವಕಾಶ ದೊರೆತಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧ ಎಂದು ಮಾಜಿ ಸಚಿವ ರಮಾನಾಥ ರೈ ಹೇಳಿದರು.

 

Advertisement
Tags :
LatetsNewsNewsKannadaಕಾಂಗ್ರೆಸ್ಸಮಾವೇಶಸಹ್ಯಾದ್ರಿ ಕಾಲೇಜು
Advertisement
Next Article