For the best experience, open
https://m.newskannada.com
on your mobile browser.
Advertisement

ಪ್ರತಾಪ್ ಸಿಂಹ ತಮ್ಮನ ವಿರುದ್ಧ ಕಾಂಗ್ರೆಸ್‌ ಗಂಭೀರ ಆರೋಪ: ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್‌

ಪ್ರತಾಪ್‌ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡಿದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.
12:39 PM Dec 24, 2023 IST | Ramya Bolantoor
ಪ್ರತಾಪ್ ಸಿಂಹ ತಮ್ಮನ  ವಿರುದ್ಧ ಕಾಂಗ್ರೆಸ್‌  ಗಂಭೀರ ಆರೋಪ   ವಿಡಿಯೋ ಬಿಡುಗಡೆ ಮಾಡಿದ ಕಾಂಗ್ರೆಸ್‌

ಬೆಂಗಳೂರು: ಪ್ರತಾಪ್‌ ಸಿಂಹ ಸಂಸತ್ ದಾಳಿಕೋರರಿಗೆ ಪಾಸ್ ನೀಡಿದರೆ ತಮ್ಮ ವಿಕ್ರಮ್ ಸಿಂಹ ಮರಗಳ್ಳತನದಲ್ಲಿ ತೊಡಗಿದ್ದಾನೆ ಎಂದು ಕಾಂಗ್ರೆಸ್‌ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಹಂಚಿಕೊಂಡಿದೆ.

Advertisement

ಪ್ರತಾಪ್‌ ಸಿಂಹನ ಸಹೋದರ ವಿಕ್ರಮ್ ಸಿಂಹ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಮರಗಳನ್ನು ಕಡಿದು ಸಾಗಾಟ ನಡೆಸಿರುದ್ದಾರೆ. ಇಲ್ಲಿನ ತಹಸೀಲ್ದಾರ್ ಮಮತಾ ಅವರಿಂದ ಈ ಪ್ರಕರಣ ಬೆಳಕಿಗೆ ಬಂದಿದೆ ಎಂದು ಕಾಂಗ್ರೆಸ್ ತಿಳಿಸಿದೆ.

ಈ ಅಪರಾಧದಲ್ಲಿ ಕೆಲವು ಅರಣ್ಯ ಇಲಾಖೆಯ ಅಧಿಕಾರಿಗಳೂ ಭಾಗಿಯಾಗಿದ್ದಾರೆ. ಘಟನೆ ಬಗ್ಗೆ ಸಚಿವ ಈಶ್ವರ ಖಂಡ್ರೆ ತನಿಖೆಗೆ ಆದೇಶ ಮಾಡಿದ್ದಾರೆ. ಬಿಜೆಪಿಯ ಜನಪ್ರತಿನಿಧಿಗಳು ಹಾಗೂ ಅವರ ಕುಟುಂಬಸ್ಥರು ಕೊಳ್ಳೆ ಹೊಡೆಯುವುದರಲ್ಲೇ ಬ್ಯುಸಿಯಾಗಿರುವುದೇಕೆ? ಎಂದು ಕಾಂಗ್ರೆಸ್‌ ಪ್ರಶ್ನೆ ಮಾಡಿದೆ.

Advertisement

https://twitter.com/INCKarnataka?ref_src=twsrc%5Etfw%7Ctwcamp%5Etweetembed%7Ctwterm%5E1738576710361092230%7Ctwgr%5Ebf452ce37b99de11e02c752ca9437327c6691771%7Ctwcon%5Es1_&ref_url=https%3A%2F%2Fwww.prajavani.net%2Fnews%2Fkarnataka-news%2Fpratap-simhas-younger-brother-vikram-involved-in-tree-felling-congress-2616327

Advertisement
Tags :
Advertisement