For the best experience, open
https://m.newskannada.com
on your mobile browser.
Advertisement

ರಾಮ ಮಂದಿರ ಉದ್ಘಾಟನೆ'ಗೆ ಹೋಗಲ್ಲ: 'ಕಾಂಗ್ರೆಸ್' ಅಧಿಕೃತವಾಗಿ ಘೋಷಣೆ

ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಹೋಗುವುದಿಲ್ಲ ಎಂದು ತಿಳಿಸಿದೆ. 'ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೇವಲ ಚುನಾವಣಾ ಲಾಭ ಪಡೆಯಲು ಅರ್ಧಕ್ಕೆ ನಿಂತಿರುವ ದೇವಾಲಯವನ್ನು ಉದ್ಘಾಟನೆ ಮಾಡುತ್ತಿರುವುದು ಸ್ಪಷ್ಟವಾಗಿದೆ' ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.
05:35 PM Jan 10, 2024 IST | Ashitha S
ರಾಮ ಮಂದಿರ ಉದ್ಘಾಟನೆ ಗೆ ಹೋಗಲ್ಲ   ಕಾಂಗ್ರೆಸ್  ಅಧಿಕೃತವಾಗಿ ಘೋಷಣೆ

ನವದೆಹಲಿ: ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರದ ಉದ್ಘಾಟನೆಗೆ ಹೋಗುವುದಿಲ್ಲ ಎಂದು ತಿಳಿಸಿದೆ. "ಬಿಜೆಪಿ ಮತ್ತು ಆರ್‌ಎಸ್‌ಎಸ್ ನಾಯಕರು ಕೇವಲ ಚುನಾವಣಾ ಲಾಭ ಪಡೆಯಲು ಅರ್ಧಕ್ಕೆ ನಿಂತಿರುವ ದೇವಾಲಯವನ್ನು ಉದ್ಘಾಟನೆ ಮಾಡುತ್ತಿರುವುದು ಸ್ಪಷ್ಟವಾಗಿದೆ" ಎಂದು ಪಕ್ಷ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ.

Advertisement

2019 ರ ಗೌರವಾನ್ವಿತ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವೀಕರಿಸಿ ಮತ್ತು ಜನರ ನಂಬಿಕೆಯನ್ನು ಗೌರವಿಸಿ, ಶ್ರೀ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಅಧೀರ್ ರಂಜನ್ ಚೌಧರಿ ಅವರು ಈ ಕಾರ್ಯಕ್ರಮಕ್ಕೆ ಬಿಜೆಪಿ ಮತ್ತು ಆರೆಸ್ಸೆಸ್ ಆಹ್ವಾನವನ್ನು ಗೌರವದಿಂದ ತಿರಸ್ಕರಿಸುತ್ತಾರೆ.

ಜನವರಿ 22 ರಂದು ನಡೆಯಲಿರುವ ರಾಮಮಂದಿರ ಸಮಾರಂಭದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ 6 ಸಾವಿರಕ್ಕೂ ಹೆಚ್ಚು ಜನರಿಗೆ ಆಹ್ವಾನಗಳನ್ನು ಕಳುಹಿಸಲಾಗಿದೆ.

Advertisement

ಪ್ರತಿಷ್ಠಾಪನಾ ಸಮಾರಂಭಕ್ಕೆ ಹಲವಾರು ಉನ್ನತ ರಾಜಕಾರಣಿಗಳು, ಕ್ರೀಡಾಪಟುಗಳು ಮತ್ತು ಸೆಲೆಬ್ರಿಟಿಗಳನ್ನು ಆಹ್ವಾನಿಸಲಾಗಿತ್ತು. ಅದರಂತೇ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಅಧೀರ್ ರಂಜನ್ ಚೌಧರಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಆಹ್ವಾನ ನೀಡಲಾಗಿದೆ. ಆದರೆ ಇದನ್ನು ತಿರಸ್ಕರಿಸಿರುವುದಾಗಿ ತಿಳಿಸಿದ್ದಾರೆ.

Advertisement
Tags :
Advertisement