ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಮೂರು ದಶಕಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲಿದೆ: ಕೈ ಅಭ್ಯರ್ಥಿ ಪದ್ಮರಾಜ್

ದಕ್ಷಿಣ ಕನ್ನಡ ಲೋಕಸಬಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದು ನಗರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದರು.
05:21 PM Apr 24, 2024 IST | Ashitha S

ಮಂಗಳೂರು: ದಕ್ಷಿಣ ಕನ್ನಡ ಲೋಕಸಬಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಅವರಿಂದು ನಗರದಲ್ಲಿ ಮಾಧ್ಯಮ ಗೋಷ್ಠಿ ನಡೆಸಿದರು. ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಪದ್ಮರಾಜ್ ಆರ್ ಅವರು, ಚುನಾವಣೆ ಪ್ರಜಾಪ್ರಭುತ್ವದ ಹಬ್ಬ. ಈ ಪ್ರಜಾಪ್ರಭುತ್ವ ಈ ಹಬ್ಬದಲ್ಲಿ ಎಲ್ಲರೂ ಭಾಗವಹಿಸಬೇಕು. ಮತಯಾಚನೆ ಸಂದರ್ಭ ದ್ವೇಷ ಬಿತ್ತುವ ಕೆಲಸ ಮಾಡಿಲ್ಲ.

Advertisement

ಟೀಕೆ ಟಿಪ್ಪಣೆ ಗೆ ಈ ಸಂದರ್ಭದಲ್ಲಿ ಅವಕಾಶ ನೀಡಿಲ್ಲ. ಕ್ಷೇತ್ರದ ಜನ ಈಬಾರಿ ಬದಲಾವಣೆ ಬಯಸಿದ್ದಾರೆ. ಮೂರು ದಶಕಗಳ ಬಳಿಕ ಕ್ಷೇತ್ರದಲ್ಲಿ ಕಾಂಗ್ರೆಸ್ ಭಾರೀ ಅಂತರದಿಂದ ಜಯಗೊಳಿಸಲಿದೆ.

ಮನೆಮನೆಗೆ ತೆರಳಿ ಕಾಂಗ್ರೆಸ್ ಪಕ್ಷದ ಸಾಧನೆಯನ್ನು ವಿವರಿಸಿ ಜನರಲ್ಲಿ ಮತ ಯಾಚಿಸಿದ್ದೇವೆ. ಜನರನ್ನು ಪ್ರೀತಿ, ವಿಶ್ವಾಸದಿಂದ ಬೆಸೆಯುವ ಕೆಲಸ ಮಾಡಿದ್ದೇವೆ. ಜಾತಿ ಧರ್ಮಗಳ ಮಧ್ಯೆ ವಿಷಬೀಜ ಬಿತ್ತಿ ಮತ ಕೇಳುವುದು ಬಿಜೆಪಿಗರ ಮನೋಸ್ಥಿತಿ. ಈ ಬಾರಿ ಜಿಲ್ಲೆಯಲ್ಲಿ ಬಿಜೆಪಿಗೆ ಜನರು ತಕ್ಕ ಉತ್ತರ ನೀಡಲಿದ್ದಾರೆ. ಜಿಲ್ಲೆಯಲ್ಲಿ ಅಭಿವೃದ್ಧಿ ಕೆಲಸ ನಡೆದಿರುವುದು ಕಾಂಗ್ರೆಸ್ ಸಂಸದರು ಇದ್ದಾಗ ಮಾತ್ರ.

Advertisement

ನಂತರ ಗೆದ್ದ ಬಿಜೆಪಿ‌ ಸಂಸದರು ಧರ್ಮ ಧರ್ಮಗಳ ಮಧ್ಯೆ ಎತ್ತಿಕಟ್ಟುವ ಮೂಲಕ ಜಿಲ್ಲೆಯ ಶಾಂತಿ ಸೌಹಾರ್ದತೆಗೆ ಧಕ್ಕೆ ಉಂಟುಮಾಡಿದ್ದಾರೆ. ಜಿಲ್ಲೆ ಕೋಮು ಸೂಕ್ಷ್ಮ ಎಂಬ ಹಣೆಪಟ್ಟಿ ಕಟ್ಟಿರುವ ಕಾರಣ ಇಲ್ಲಿ ಉದ್ಯೋಗಗಳು ಸೃಷ್ಟಿಯಾಗುತ್ತಿಲ್ಲ. ಕ್ಷೇತ್ರದಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲಿದೆ ಎಂದರು.

Advertisement
Tags :
GOVERNMENTindiaKARNATAKANewsKarnatakaಪದ್ಮರಾಜ್ಮಂಗಳೂರು
Advertisement
Next Article