ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ನೈಸರ್ಗಿಕ ಸಂಪತ್ತಿನ ಸಂರಕ್ಷಣೆ ನಮ್ಮೆಲ್ಲರ ಸಾಮೂಹಿಕ ಹೊಣೆಗಾರಿಕೆ: ಮಲ್ಲೈ ಮುಗಿಲನ್

ಮಣ್ಣು, ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ. 
04:32 PM Mar 14, 2024 IST | Ashika S

ಮಂಗಳೂರು: ಮಣ್ಣು, ನೀರು,ಗಾಳಿ ಸೇರಿದಂತೆ ನೈಸರ್ಗಿಕ ಸಂಪತ್ತಿನ ಮಿತ ಬಳಕೆ ಸಂರಕ್ಷಣೆ ನಮ್ಮೆಲ್ಲರ ಸಾಮೂ ಹಿಕ ಹೊಣೆ ಗಾರಿಕೆಯಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Advertisement

ಅವರು ಗುರುವಾರ ಜಿಲ್ಲಾಧಿಕಾರಿ ನಿವಾಸದಲ್ಲಿ ಜಿಲ್ಲಾಡಳಿತ, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘ,ಮಂಗಳೂರು ಯುವ ರೆಡ್ ಕ್ರಾಸ್ ಘಟಕ, ಬ್ಯಾಂಕ್ ಆಫ್ ಬರೋಡಾದ ಸಹಯೋಗದೊಂದಿಗೆ ಹಮ್ಮಿಕೊಂಡ ಜೀವ ಜಲ ಉಳಿಸಿ ಅಭಿಯಾನದ ಜಲ ಸಂರಕ್ಷಣೆಯ ಭಿತ್ತಿ ಪತ್ರ ಬಿಡುಗಡೆಗೊಳಿಸಿ, ನೀರಿನ ಪಾತ್ರಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿ ಮಾತನಾಡಿದರು.

ಈ ನೈಸರ್ಗಿಕ ಸಂಪತ್ತು ಜಗತ್ತಿನ ಈಗಿನ ಮತ್ತು ಭವಿಷ್ಯದ ಸಕಲ ಜೀವರಾಶಿಗಳಿಗೆ ಸೇರಿದೆ ಇದನ್ನು ಮಿತವಾಗಿ ಬಳಸುವುದು ಉಳಿಸುವುದು ಅತೀ ಅಗತ್ಯ ಈ ಬಗ್ಗೆ ಸಾಮೂಹಿಕ ಜಾಗೃತಿ ಅಗತ್ಯವಿದೆ ಪ್ರತಿಯೊಬ್ಬರು ಈ ಬೇಸಗೆಯ ಸಂದರ್ಭದಲ್ಲಿ ನೀರು ಉಳಿಸುವ ಮತ್ತು ಪ್ರಾಣಿ, ಪಕ್ಷಿಗಳ ಜೀವ ರಕ್ಷಣೆಗೆ ತಮ್ಮ ಮನೆಯ ಹಿತ್ತಲಲ್ಲಿ ಸಣ್ಣ ಪಾತ್ರಗಳಲ್ಲಿ ನೀರು ಇಡುವ ಮೂಲಕ ಜೀವ ಕೆಲಸದಲ್ಲಿ ಕೈ ಜೋಡಿಸಬೇಕಾಗಿದೆ ಎಂದು ಮುಲ್ಲೈ ಮುಗಿಲನ್ ತಿಳಿಸಿದ್ದಾರೆ.

Advertisement

ಜೀವ ಜಲ ಉಳಿಸಿ ಅಭಿಯಾನಕ್ಕೆ ಬ್ಯಾಂಕ್ ಆಫ್ ಬರೋಡಾದ ಎಲ್ಲಾ ಶಾಖೆಗಳ ಮೂಲಕ ಸಹಕಾರ ನೀಡುವುದಾಗಿ
ಬ್ಯಾಂಕ್ ಆಫ್ ಬರೋಡಾದ ಮಹಾ ಪ್ರಬಂಧಕರು ಮತ್ತು ಮಂಗಳೂರು ವಲಯದ ಬ್ಯಾಂಕ್ ನ ಮುಖ್ಯಸ್ಥರಾದ ಗಾಯತ್ರಿ ಆರ್ ತಿಳಿಸಿದ್ದಾರೆ.

ಬ್ಯಾಂಕ್ ಆಫ್ ಬರೋಡಾದ ಮುಖ್ಯ ಪ್ರಬಂಧಕ ಸತೀಶ್ ಪಾಠ್ಕರ್ ,ಜಿಲ್ಲಾ ವಿಪತ್ತು ನಿರ್ವಹಣಾ ಘಟಕದ ಅಧಿಕಾರಿ ವಿಜಯ ಕುಮಾರ್ ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತ ಆನಂದ ಸಿ.ಎಲ್,ಮಂಗಳೂರು ವಿಶ್ವ ವಿದ್ಯಾನಿಲಯದ ಯುವ ರೆಡ್ ಕ್ರಾಸ್ ಘಟಕದ ನೋಡಲ್ ಅಧಿಕಾರಿ ಗಾಯತ್ರಿ ಎನ್ ಮನಪಾ ಅಭಿಯಂತರ ಅಶ್ವಿನ್, ಇಂಡಿಯನ್ ರೆಡ್ ಕ್ರಾಸ್ ಘಟಕದ ಹಿರಿಯ ಸದಸ್ಯ ರವೀಂದ್ರನಾಥ ಉಚ್ಚಿಲ್, ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ, ಮಂಗಳೂರು ವಿ.ವಿ.ಕಾಲೇಜು, ಬೆಸೆಂಟ್, ಗೋಕರ್ಣ ನಾಥ ಮತ್ತು ರಾಮಕೃಷ್ಣ, ರೋಶನಿ ನಿಲಯ ಕಾಲೇಜುಗಳ ಯುವ ರೆಡ್ ಕ್ರಾಸ್‌ ಘಟಕದ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ದಕ್ಷಿಣ ಕನ್ನಡ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿದರು, ಕೋಶಾಧಿಕಾರಿ ಪುಷ್ಪರಾಜ್ ಬಿ.ಎನ್ ಕಾರ್ಯಕ್ರಮ ನಿರೂಪಿಸಿದರು. ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ ವಂದಿಸಿದರು.

Advertisement
Tags :
LatestNewsmangaluruNewsKannadaಜಿಲ್ಲಾಧಿಕಾರಿ
Advertisement
Next Article