For the best experience, open
https://m.newskannada.com
on your mobile browser.
Advertisement

ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ: ಸುನಿಲ್ ಕುಮಾರ್ ಬಜಾಲ್

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10 ವರ್ಷಗಳ ಕಾಲ ದೇಶವನ್ನಾಳಿದ ನರೇಂದ್ರ ಮೋದಿ ಸರಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಸಂಹಿತೆಗಳನ್ನಾಗಿ ರೂಪಿಸುವ ಮೂಲಕ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ.
10:37 PM May 02, 2024 IST | Ashika S
ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ  ಸುನಿಲ್ ಕುಮಾರ್ ಬಜಾಲ್

ಉಳ್ಳಾಲ:  ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಅಂದಿನ ಕಾರ್ಮಿಕ ವರ್ಗ ಇಂದು ಮತ್ತೆ ದೇಶವನ್ನು ಉಳಿಸಲು ಸನ್ನದ್ದವಾಗಬೇಕು.ಕಳೆದ 10 ವರ್ಷಗಳ ಕಾಲ ದೇಶವನ್ನಾಳಿದ ನರೇಂದ್ರ ಮೋದಿ ಸರಕಾರ ಕಾರ್ಮಿಕ ಕಾನೂನುಗಳನ್ನು ತಿದ್ದುಪಡಿ ಮಾಡಿ ಸಂಹಿತೆಗಳನ್ನಾಗಿ ರೂಪಿಸುವ ಮೂಲಕ ಕಾರ್ಮಿಕರನ್ನು ಮತ್ತೆ ಗುಲಾಮಗಿರಿಯತ್ತ ತಳ್ಳುವ ಹುನ್ನಾರ ನಡೆಸುತ್ತಿದೆ.

Advertisement

ಮತ್ತೊಂದೆಡೆ ದೇಶದ ಐಕ್ಯತೆಯನ್ನು ಮುರಿದು ಜಾತಿ ಧರ್ಮದ ಹೆಸರಿನಲ್ಲಿ ಕಾರ್ಮಿಕ ವರ್ಗವನ್ನು ಒಡೆಯುವ ಪಿತೂರಿ ನಡೆಸುತ್ತಿದೆ. ದೇಶದ ಸ್ವಾತಂತ್ರ್ಯ ಸಮಗ್ರತೆ ಸಾರ್ವಭೌಮತ್ವಕ್ಕೆ ಅಪಾಯ ತಂದೊಡ್ಡುವ ಕಾರ್ಪೊರೇಟ್ ಕೋಮುವಾದಿಗಳ ಅಕ್ರಮ ಕೂಟದಿಂದ ದೇಶವನ್ನು ಮುಕ್ತಗೊಳಿಸಬೇಕಾಗಿದೆ ಎಂದು CITU ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಬಜಾಲ್ ರವರು ಸೇರಿದ್ದ ಕಾರ್ಮಿಕರಿಗೆ ಕರೆ ನೀಡಿದರು.

ಅಂತರಾಷ್ಟ್ರೀಯ ಕಾರ್ಮಿಕ ದಿನಾಚರಣೆ ಯ ಅಂಗವಾಗಿ ಉಳ್ಳಾಲ ಜಂಕ್ಷನ್ ನಲ್ಲಿ ಜರುಗಿದ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡುತ್ತಾ ಈ ಮಾತುಗಳನ್ನು ಹೇಳಿದರು. ಪ್ರಾರಂಭದಲ್ಲಿ ಉಳ್ಳಾಲ ಮಾಸ್ತಿಕಟ್ಟೆಯಿಂದ ಕಾರ್ಮಿಕರ ಆಕರ್ಷಕ ಮೆರವಣಿಗೆಯು ಜರುಗಿತು.

Advertisement

CITU ಜಿಲ್ಲಾ ಉಪಾಧ್ಯಕ್ಷರಾದ ಸುಕುಮಾರ್ ತೊಕ್ಕೋಟುರವರು ಮಾತನಾಡುತ್ತಾ, *ಜಗತ್ತಿನ ದುಡಿಯುವ ವರ್ಗ ಸದಾ ಒಂದಾಗಿ ಇರಬೇಕೆನ್ನುವ ಈ ಮೇ ದಿನಾಚರಣೆಯ ಸಂದರ್ಭದಲ್ಲಿ ಪ್ಯಾಲೆಸ್ತೀನ್ ನ ಜನತೆ ತಮ್ಮ ತಾಯ್ನಾಡಿಗಾಗಿ ಜೀವದ ಹಂಗು ತೊರೆದು ಹೋರಾಡುತ್ತಿದ್ದು,ಜಗತ್ತಿನ ಕಾರ್ಮಿಕ ವರ್ಗ ಸಂಪೂರ್ಣ ಬೆಂಬಲ ಘೋಷಿಸಿದ್ದರೂ, ಅಮೇರಿಕಾ ಮಾತ್ರ ಇಸ್ರೇಲ್ ಗೆ ಬೆಂಗಾವಲಾಗಿ ನಿಂತು ಸಾವಿರಾರು ಮುಗ್ಧ ಮಕ್ಕಳು ಮಹಿಳೆಯರ ಮಾರಣಹೋಮವನ್ನೇ ನಡೆಸಿದೆ.

ಮಾತ್ರವಲ್ಲದೆ ಜಗತ್ತಿನೆಲ್ಲೆಡೆ ಯುದ್ದದ ಕಾರ್ಮೋಡ ಕವಿಯುವಂತೆ ಯುದ್ದಪಿಪಾಸು ರಾಷ್ಟ್ರ ಅಮೇರಿಕಾ ಹುನ್ನಾರ ನಡೆಸುತ್ತಿದೆ.ಇಂತಹ ಸಾಮ್ಯಾಜ್ಯಶಾಹಿ ಶಕ್ತಿಗಳ ಹಾಗೂ ಬಂಡವಾಳಶಾಹಿ ವರ್ಗದ ಜೀವ ವಿರೋಧಿ ನಿಲುವುಗಳ ವಿರುದ್ದ ದುಡಿಯುವ ಜನತೆ ಒಂದಾಗಿ ಪ್ರಬಲ ಪ್ರತಿರೋಧ ಒಡ್ಡಬೇಕಾಗಿದೆ ಎಂದು ಹೇಳಿದರು.

CITU ಜಿಲ್ಲಾ ನಾಯಕರಾದ ಜಯಂತ ನಾಯಕ್ ರವರು ಮಾತನಾಡಿ, ಮೇ ದಿನದ ಮಹತ್ವವನ್ನು ವಿವರಿಸುತ್ತಾ, 139 ವರ್ಷಗಳ ಹಿಂದೆ ಸಮರಶೀಲ ಹೋರಾಟಗಳ ಮೂಲಕ ಪಡೆದಂತಹ 8 ಗಂಟೆಗಳ ದುಡಿಮೆಯ ಹಕ್ಕನ್ನು ಮತ್ತೆ ಆಳುವ ವರ್ಗಗಳು ತಮ್ಮ ಕೈವಶ ಮಾಡಲು ನಡೆಸುವ ಹುನ್ನಾರವನ್ನು ಎಳೆಎಳೆಯಾಗಿ ಬಿಡಿಸಿ ಹೇಳಿದರು.

ರೈತ ಸಂಘಟನೆಯ ಮುಖಂಡರಾದ ಕ್ರಷ್ಣಪ್ಪ ಸಾಲಿಯಾನ್ ರವರು ಮೇ ದಿನಾಚರಣೆಗೆ ಶುಭ ಕೋರಿ ಮಾತನಾಡುತ್ತಾ, ದೇಶದಲ್ಲಿ ರೈತ ಕಾರ್ಮಿಕರ ಸಖ್ಯತೆ ಇನ್ನಷ್ಟು ಬಲಗೊಳ್ಳಬೇಕೆಂದು ಆಶಯ ವ್ಯಕ್ತಪಡಿಸಿದರು.

ಸಭೆಯ ಅಧ್ಯಕ್ಷತೆಯನ್ನು CITU ಉಳ್ಳಾಲ ತಾಲೂಕು ಅಧ್ಯಕ್ಷರಾದ ಸುಂದರ ಕುಂಪಲ ವಹಿಸಿದ್ದರು. ವೇದಿಕೆಯಲ್ಲಿ CITU ಜಿಲ್ಲಾ ನಾಯಕರಾದ ಪದ್ಮಾವತಿ ಶೆಟ್ಟಿ, ಜನಾರ್ದನ ಕುತ್ತಾರ್,ರೋಹಿದಾಸ್ ಭಟ್ನಗರ, ವಿಲಾಸಿನಿ ತೊಕ್ಕೋಟು,ರತ್ನಮಾಲಾ, ಚಂದ್ರಹಾಸ ಪಿಲಾರ್ ಮುಂತಾದವರು ಉಪಸ್ಥಿತರಿದ್ದರು.

Advertisement
Tags :
Advertisement