ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜರಾಜೇಶ್ವರಿ ನಗರದಲ್ಲಿ ವಿದ್ಯಾರ್ಥಿಗಳಿಂದ ಸಂವಿಧಾನ ಜಾಗೃತಿ ಅಭಿಯಾನ

ಸಂವಿಧಾನ ರಚನೆಗೊಂಡು 75 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ 'ಸಂವಿಧಾನ ಜಾಗೃತಿ ರಥಯಾತ್ರೆಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೋಪಾಲನ್‌ ಆರ್ಕೇಡ್‌ನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಆಚರಿಸಲಾಯಿತು.
07:30 AM Feb 22, 2024 IST | Ashika S

ಬೆಂಗಳೂರು: ಸಂವಿಧಾನ ರಚನೆಗೊಂಡು 75 ವರ್ಷ ಪೂರ್ಣಗೊಳಿಸಿದ ಸಂಭ್ರಮಾಚರಣೆಯ ಪ್ರಯುಕ್ತ ನಡೆಯುತ್ತಿರುವ "ಸಂವಿಧಾನ ಜಾಗೃತಿ ರಥಯಾತ್ರೆಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರದ ಗೋಪಾಲನ್‌ ಆರ್ಕೇಡ್‌ನಲ್ಲಿ 500ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೇರಿ ಆಚರಿಸಲಾಯಿತು.

Advertisement

ಎಲ್ಲಾ ವಿದ್ಯಾರ್ಥಿಗಳು ಒಟ್ಟು ಸೇರಿ ಗೋಪಾಲನ್‌ ಆರ್ಕೇಡ್‌ನಲ್ಲಿ ಸಂವಿಧಾನದ ಪೀಠಿಕೆಯನ್ನು ಓದಿದರು, ಸಂವಿಧಾನದಲ್ಲಿರುವ ನಮ್ಮ ಹಕ್ಕಿನ ಬಗ್ಗೆ ಜನರಿಗೆ ಅರಿವು ಮೂಡಿಸಿದರು. ಇದಷ್ಟೇ ಅಲ್ಲದೆ, ಸಂವಿಧಾನ ನಮಗೆ ಏನೆಲ್ಲಾ ನೀಡುತ್ತಿದೆ ಎಂಬುದರ ಬಗ್ಗೆಯೂ ಸಹ ಬೀದಿ ನಾಟಕ ಮಾಡುವ ಮೂಲಕ ಜಾಗೃತಿ ಮೂಡಿಸಿದರು, ಇನ್ನೂ ಕೆಲ ವಿದ್ಯಾರ್ಥಿಗಳು ಇತರೆ ಸಾಂಸ್ಕೃತಿಕ ನೃತ್ಯ, ಕಾರ್ಯಕ್ರಮದ ನಿರೂಪಣೆ, ಮಾಡಿದರು.

ಈ ಜಾಗೃತಿ ಅಭಿಯಾನದಲ್ಲಿ ಸಂಪನ್ಮೂಲ ವ್ಯಕ್ತಿಗಳು ಭಾಗವಹಿಸಿ, ಸಂವಿಧಾನದ ಕುರಿತು ಭಾಷಣ ಮಾಡಿದರು. ಕೊನೆಯದಾಗಿ ಹ್ಯಾಲೊಜೆನ್‌ ಆಕಾಶ ಬುಟ್ಟಿಗಳನ್ನು ಆಕಾಶದಲ್ಲಿ ಹಾರಿ ಬಿಟ್ಟರು. ಒಟ್ಟಾರೆ ನಮ್ಮ ಸಂವಿಧಾನ ನಮಗೆ ಏನೆಲ್ಲಾ ನೀಡಿದೆ ಎಂಬುದರ ಬಗ್ಗೆ ಜನರಿಗೆ ತಿಳಿಸಲು ವೈವಿಧ್ಯವಾಗಿ ಕಾರ್ಯಕ್ರಮ ನಡೆಸಲಾಯಿತು.

Advertisement

Next Article