ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸುಪ್ರೀಂ ಕೋರ್ಟ್ ಆವರಣದಲ್ಲಿ ಅಂಬೇಡ್ಕರ್ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ದಿನದ ಅಂಗವಾಗಿ ಸುಪ್ರೀಂ ಕೋರ್ಟ್ ಆವರಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿದರು.
05:26 PM Nov 26, 2023 IST | Ashitha S

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂವಿಧಾನ ದಿನದ ಅಂಗವಾಗಿ ಸುಪ್ರೀಂ ಕೋರ್ಟ್ ಆವರಣದಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ಭಾನುವಾರ ಅನಾವರಣಗೊಳಿಸಿದರು.

Advertisement

ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್  ಮತ್ತು ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೇಘವಾಲ್ ಅವರು ಭಾರತೀಯ ಸಂವಿಧಾನದ ಪಿತಾಮಹನಿಗೆ ಕೈ ಮುಗಿದು 7 ಅಡಿ ಎತ್ತರದ ಶಿಲ್ಪಕ್ಕೆ ಪುಷ್ಪ ನಮನ ಸಲ್ಲಿಸಿದರು.

ರಾಷ್ಟ್ರಪತಿ ಮುರ್ಮು ಮತ್ತು ಸಿಜೆಐ ಚಂದ್ರಚೂಡ್ ಅವರು ಸಸಿ ನೆಟ್ಟು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸಮಾರಂಭದಲ್ಲಿ ಉನ್ನತ ನ್ಯಾಯಾಲಯದ ಹಲವು ನ್ಯಾಯಾಧೀಶರು ಭಾಗವಹಿಸಿದ್ದರು.

Advertisement

Advertisement
Tags :
indiaLatestNewsNewsKannadaಅಂಬೇಡ್ಕರ್ ಪ್ರತಿಮೆನವದೆಹಲಿಬೆಂಗಳೂರುರಾಷ್ಟ್ರಪತಿ
Advertisement
Next Article