ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣ?

ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬಂದಲ್ಲಿ ಈ ಮಾರ್ಗದಲ್ಲಿರುವ ಎಲ್ಲ ನಗರಗಳು ಅತಿವೇಗದಲ್ಲಿ ಅಭಿವೃದ್ಧಿ ಹೊಂದುತ್ತವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
10:49 PM Nov 09, 2023 IST | Ashika S

ಬೆಂಗಳೂರು: ಬೆಂಗಳೂರು-ಮಂಗಳೂರು ನಡುವೆ ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಅಸ್ತಿತ್ವಕ್ಕೆ ಬಂದಲ್ಲಿ ಈ ಮಾರ್ಗದಲ್ಲಿರುವ ಎಲ್ಲ ನಗರಗಳು ಅತಿವೇಗದಲ್ಲಿ ಅಭಿವೃದ್ಧಿ ಹೊಂದುತ್ತವೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರೂ ಆಗಿರುವ ದಿನೇಶ್ ಗುಂಡೂರಾವ್, ಯೋಜನೆಯ ಸಲಹಾ ಮತ್ತು ಫೆಸಿಲಿಟೇಷನ್ ಸಂಸ್ಥೆ ಯುರೋಪಿಯನ್ ಉದ್ಯಮ ಹಾಗೂ ತಂತ್ರಜ್ಞಾನ ಕೇಂದ್ರ (ಇಬಿಟಿಸಿ) ನ ಉನ್ನತಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸಚಿವರು ಮಾತನಾಡಿದರು. ಈ ವೇಳೆ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಲಕ್ಷ್ಮಿ ಹೆಬ್ಬಾಳ್ಕರ್ ಸಹ ಭಾಗಿಯಾಗಿದ್ದರು.

ಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ ಹೈ ಸ್ಪೀಡ್ ಕಾರಿಡಾರ್ ಯೋಜನೆಯಲ್ಲಿ ಬೆಂಗಳೂರು-ಮಂಗಳೂರು ನಡುವೆ 6-8 ಪಥಗಳ ಹೈಸ್ಪೀಡ್ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಹೊಂದಿದೆ.

Advertisement

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆಗಳನ್ನು ಹೊಂದಿರುವ ದಿನೇಶ್ ಗುಂಡೂರಾವ್, ಕಾರಿಡಾರ್ ಮಾರ್ಗ ನಕ್ಷೆಯನ್ನು ಹೆಚ್ಚಿನ ಮಾಹಿತಿಯೊಂದಿಗೆ ಚರ್ಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರೊಂದಿಗೆ ಮಾತುಕತೆ ನಡೆಸುವುದಾಗಿ ಸಭೆಯಲ್ಲಿ ಭರವಸೆ ನೀಡಿದರು.

Advertisement
Tags :
LatetsNewsNewsKannadaಅಭಿವೃದ್ಧಿಇಂಟಿಗ್ರೇಟೆಡ್ ಗ್ರೀನ್ ಫೀಲ್ಡ್ಕಾರಿಡಾರ್ದಿನೇಶ್ ಗುಂಡೂರಾವ್ಹೈ ಸ್ಪೀಡ್
Advertisement
Next Article