ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ ಹಲವೆಡ 600 ಇಂದಿರಾ ಕ್ಯಾಂಟೀನ್‌ ನಿರ್ಮಾಣ : ಸಿಎಂ ಘೋಷಣೆ

ಇದೀಗ ಮುಂಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವಡೆ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಕನಿಷ್ಠ 600 ಇಂದಿರಾ ಕ್ಯಾಂಟೀನ್‌ ನಿರ್ಮಾಣ  ಮಾಡುವ ಉದ್ದೇಶ ಹೊಂದಿದ್ದಾರೆ.
06:05 PM Mar 11, 2024 IST | Nisarga K
ರಾಜ್ಯದ ಹಲವೆಡ 600 ಇಂದಿರಾ ಕ್ಯಾಂಟೀನ್‌ ನಿರ್ಮಾಣ : ಸಿಎಂ ಘೋಷಣೆ

ಬೆಂಗಳೂರು: ಇದೀಗ ಮುಂಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಹಲವಡೆ ಇಂದಿರಾ ಕ್ಯಾಂಟೀನ್‌ ನಿರ್ಮಾಣ ಮಾಡುವುದಾಗಿ ಸೋಮವಾರ ಘೋಷಿಸಿದ್ದಾರೆ. ಕನಿಷ್ಠ 600 ಇಂದಿರಾ ಕ್ಯಾಂಟೀನ್‌ ನಿರ್ಮಾಣ  ಮಾಡುವ ಉದ್ದೇಶ ಹೊಂದಿದ್ದಾರೆ.

Advertisement

ಇಂದು ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ''ಇಂದಿರಾ ಕ್ಯಾಂಟೀನ್‌ನಲ್ಲಿ ಎಲ್ಲರಿಗೂ 5 ರೂ.ಗೆ ಬೆಳಗಿನ ಉಪಾಹಾರ ಮತ್ತು 10 ರೂ.ಗೆ ಊಟ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಟಾಕ್ಸಿ ಮತ್ತು ಇತರೆ ಚಾಲಕರ ಮನವಿ ಮೇರೆಗೆ ಇಂದು ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್‌ ನಿರ್ಮಿಸಲಾಗಿದೆ. ಇದೀಗ ಒಟ್ಟು 188 ಇಂದಿರಾ ಕ್ಯಾಂಟೀನ್‌ಗಳನನ್ನು ನಿರ್ಮಿಸಲು ಆರಂಭಿಸಲಾಗಿದೆ ಈಗಾಗಲೇ 40 ಕ್ಯಾಂಟೀನ್‌ ಗಳು ಪೂರ್ಣಗೊಂಡಿದ್ದು ಉಳಿದ ಕ್ಯಾಂಟೀನ್‌ಗಳು ಆದಷ್ಟು ಬೇಗ ಪೂರ್ಣಗೊಳ್ಳಲಿದೆ ಎಂದು ತಿಳಿಸಿದ್ದಾರೆ.

Advertisement

ಕೆಂಪೆಗೌಡ ವಿಮಾನ ನಿಲ್ದಾಣದಲ್ಲಿ ಕ್ಯಾಂಟೀನ್‌ನ ಅಗತ್ಯವಿದೆ ಹೀಗಾಗಿ ಮತ್ತೊಂದು ಕಾಂಟೀನ್‌ನ್ನು ಕೂಡ ಶೀಘ್ರದಲ್ಲಿ ನಿರ್ಮಿಸಲಾಗುವುದು ಎಂದು ಹೇಳಿದರು. ಹಾಗೂ ಮೆನುಗಳಲ್ಲೂ ಬದಲಾವಣೆಗೊಳಿಸಲಾಗಿದೆ ಮತ್ತು ಊಟದ ಹಾಲ್‌ಗಳನ್ನು ವಿಶಾಲವಾಗಿ ನಿರ್ಮಿಸಲಾಗಿದೆ ಎಂದರು.

ಬೆಂಗಳೂರು ಮತ್ತು ರಾಜ್ಯದ ಇತರೆ ಪ್ರದೇಶಗಳಲ್ಲಿ ಕ್ಯಾಂಟೀನ್‌ ನಿರ್ಮಿಸಲಾಗುವುದು, ಹಿಂದಿನ ಸರ್ಕಾರದ ಕ್ಯಾಂಟೀನ್‌ಗಳನ್ನು ಈಗಾಗಲೇ ಹಲವೆಡೆ ಮುಚ್ಚಲಾಗಿದೆ. ಆದರೆ ಈ ಬಾರಿ ಬಡವರ ಹೊಟ್ಟೆ ತುಂಬಿಸುವ ಉದ್ದೇಶ  ಹೊತ್ತು ಈ ಯೋಜನೆಯನ್ನು ಪುನರಾರಂಭಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement
Tags :
CMCongresscunstructionindira canteenLatestNewsNewProjectNewsKannadaSIDDARAMAIAhSTATE
Advertisement
Next Article