ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇನ್ಮುಂದೆ ರಾಜ್ಯದಲ್ಲೂ ಮಿನಿ ಒಲಿಂಪಿಕ್ಸ್: ಸಿಎಂ ಘೋಷಣೆ

ಸ್ಪೋರ್ಟ್ಸ್​​​​ನಲ್ಲಿ ಯುವಕರು ಹೆಚ್ಚು ಹೆಚ್ಚು ಭಾಗಿಯಾಗಲು, ಅವರಿಗೆ ಇನ್ನಷ್ಟು ಉತ್ತೇಜನ ನೀಡಲು ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿದೆ. 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರತಿ ವರ್ಷವೂ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.
01:21 PM Feb 16, 2024 IST | Ashitha S

ಬೆಂಗಳೂರು: ಸ್ಪೋರ್ಟ್ಸ್​​​​ನಲ್ಲಿ ಯುವಕರು ಹೆಚ್ಚು ಹೆಚ್ಚು ಭಾಗಿಯಾಗಲು, ಅವರಿಗೆ ಇನ್ನಷ್ಟು ಉತ್ತೇಜನ ನೀಡಲು ರಾಜ್ಯ ಸರ್ಕಾರ ಹೊಸ ಯೋಜನೆ ಘೋಷಣೆ ಮಾಡಿದೆ. 2024-25ನೇ ಸಾಲಿನ ಬಜೆಟ್ ಮಂಡನೆ ಮಾಡುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, ಪ್ರತಿ ವರ್ಷವೂ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲಾಗುವುದು ಎಂದು ಹೇಳಿದ್ದಾರೆ.

Advertisement

ಪ್ರತಿ ವರ್ಷವೂ ರಾಜ್ಯ ಮಟ್ಟದ ಮಿನಿ ಒಲಿಂಪಿಕ್ಸ್ ಆಯೋಜನೆ ಮಾಡಲು ಬೆಂಗಳೂರು ಉತ್ತರ ತಾಲೂಕಿನಲ್ಲಿ 70 ಎಕರೆ ವಿಸ್ತೀರ್ಣದಲ್ಲಿ ಸ್ಪೋರ್ಟ್ಸ್ ಸಿಟಿಯನ್ನು ನಿರ್ಮಾಣ ಮಾಡಲಾಗುವುದು. ಈ ಮಿನಿ ಒಲಿಂಪಿಕ್ಸ್​​ನಲ್ಲಿ ಪ್ರಥಮ, ದ್ವಿತಿಯ, ತೃತೀಯ ಸ್ಥಾನ ಪಡೆದವರಿಗೆ ಬಹುಮಾನಗಳನ್ನು ನೀಡಲಾಗುವುದು ಎಂದು ಬಜೆಟ್ ವೇಳೆ ಹೇಳಲಾಗಿದೆ.

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಚಿನ್ನದ ಪದಕ ಗಳಿಸುವ ಕ್ರೀಡಾಪಟುಗಳಿಗೆ 6 ಕೋಟಿ ರೂ., ಬೆಳ್ಳಿ ಪದಕ ಪಡೆಯುವ ಇದು ಕ್ರೀಡಾಪಟುಗಳಿಗೆ 4 ಕೋಟಿ ರೂ. ಹಾಗೂ ಕಂಚಿನ ಪದಕ ಪಡೆಯುವ ಕ್ರೀಡಾಪಟುಗಳಿಗೆ 3 ಕೋಟಿ ರೂ. ಪ್ರೋತ್ಸಾಹಧನ ಮುದಿ ನೀಡಲಾಗುವುದು ಎಂದು ಬಜೆಟ್​ನಲ್ಲಿ ಘೋಷಣೆ ಮಾಡಿದ್ದಾರೆ.

Advertisement

ಏಷಿಯನ್ ಮತ್ತು ಕಾಮನ್‌ವೆಲ್ತ್ ಕ್ರೀಡಾಕೂಟಗಳಲ್ಲಿ ಚಿನ್ನದ ಪದಕ ವಿಜೇತ ಕ್ರೀಡಾಪಟುಗಳಿಗೆ 35 ಲಕ್ಷ ರೂ., ಬೆಳ್ಳಿ ಪದಕ ವಿಜೇತ ಕ್ರೀಡಾಪಟುಗಳಿಗೆ 25 ಲಕ್ಷ ರೂ. ಹಾಗೂ ಕಂಚಿನ ಪದಕ ವಿಜೇತ – ಕ್ರೀಡಾಪಟುಗಳಿಗೆ 15 ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು ಎಂದು ಘೋಷಣೆ ಮಾಡಿದ್ದಾರೆ.

Advertisement
Tags :
GOVERNMENTKARNATAKALatestNewsNewsKannadaಒಲಿಂಪಿಕ್ಸ್ಬೆಂಗಳೂರು
Advertisement
Next Article