For the best experience, open
https://m.newskannada.com
on your mobile browser.
Advertisement

ಎಚ್​.ಡಿ. ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ!

 ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು.
05:56 PM May 09, 2024 IST | Ashitha S
ಎಚ್​ ಡಿ  ರೇವಣ್ಣಗೆ ಇನ್ನೂ ಮೂರು ದಿನ ಜೈಲೇ ಗತಿ

ಬೆಂಗಳೂರು: ಲೈಂಗಿಕ ಹಗರಣ ಆರೋಪದಲ್ಲಿ ಸಂತ್ರಸ್ತ ಮಹಿಳೆಯ ಕಿಡ್ನ್ಯಾಪ್​ ಕೇಸ್​ನಲ್ಲಿ ಬಂಧಿತರಾಗಿರುವ ಮಾಜಿ ಶಾಸಕ ಎಚ್.ಡಿ. ರೇವಣ್ಣ ಅವರ ಜಾಮೀನು ವಿಚಾರಣೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಲ್ಲಿ ನಡೆಯಿತು.

Advertisement

ರೇವಣ್ಣ ಪರ ಹಿರಿಯ ವಕೀಲ ಸಿ.ವಿ. ನಾಗೇಶ್ ಮತ್ತು ಎಸ್​ಐಟಿ ಲಾಯರ್​ ನಡುವಿನ ವಾದ-ಪ್ರತಿವಾದ ಆಲಿಸಿದ ನ್ಯಾಯಾಲಯ ಇದೀಗ ರೇವಣ್ಣ ಅರ್ಜಿ ವಿಚಾರಣೆಯನ್ನು ಸೋಮವಾರ ಬೆಳಗ್ಗೆ 11:30ಕ್ಕೆ ಮುಂದೂಡಿದೆ.

ಮೈಸೂರು ಮಹಿಳೆ ಕಿಡ್ನ್ಯಾಪ್​​ ಕೇಸ್​​ನಲ್ಲಿ ಹೆಚ್‌.ಡಿ ರೇವಣ್ಣ ಅವರು ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಜಾಮೀನು ಅರ್ಜಿ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ ಆಗಿರುವುದರಿಂದ ಸೋಮವಾರದ ತನಕ ಜೈಲುವಾಸ ಅನುಭವಿಸಬೇಕಿದೆ.

Advertisement

Advertisement
Tags :
Advertisement