For the best experience, open
https://m.newskannada.com
on your mobile browser.
Advertisement

ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ, ಎಚ್‌ಡಿಕೆ ಹೆಸರು ಬಳಸಂಗಿಲ್ಲ; ಕೋರ್ಟ್ ತಡೆಯಾಜ್ಞೆ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ಕೋರ್ಟ್​ ತಡೆಯಾಜ್ಞೆ ನೀಡಿದೆ.
05:02 PM May 06, 2024 IST | Ashitha S
ಪ್ರಜ್ವಲ್‌ ರೇವಣ್ಣ ಕೇಸಲ್ಲಿ ಎಚ್‌ಡಿಡಿ  ಎಚ್‌ಡಿಕೆ ಹೆಸರು ಬಳಸಂಗಿಲ್ಲ  ಕೋರ್ಟ್ ತಡೆಯಾಜ್ಞೆ

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣ ಹಾಗೂ ಎಚ್.ಡಿ. ರೇವಣ್ಣ ವಿರುದ್ಧದ ಅಪಹರಣ ಕೇಸ್‌ಗೆ ಸಂಬಂಧಪಟ್ಟಂತೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಅವರ ಹೆಸರನ್ನು ಬಳಸದಂತೆ ಕೋರ್ಟ್​ ತಡೆಯಾಜ್ಞೆ ನೀಡಿದೆ.

Advertisement

ಪ್ರಕರಣಗಳ ಬಗ್ಗೆ ಸುದ್ದಿ ಪ್ರಸಾರ‌ ಮಾಡುವಾಗ ತಮ್ಮ ಹೆಸರುಗಳನ್ನು ಬಳಸದಂತೆ ಸೆಷನ್ಸ್ ಕೋರ್ಟ್‌ ತಡೆಯಾಜ್ಞೆಯನ್ನು ತಂದಿದ್ದಾರೆ. ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಗೆ ಬೆಂಗಳೂರಿನ 34ನೇ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮನವಿ ಮಾಡಲಾಗಿತ್ತು. ಇದನ್ನು ಪರಿಗಣಿಸಿದ ಕೋರ್ಟ್, ಸಾಕ್ಷಿ ಇಲ್ಲದೇ ವಿಡಿಯೋ ಕೇಸ್​​​ನಲ್ಲಿ ಸುದ್ದಿ ಪ್ರಸಾರಿಸುವಂತಿಲ್ಲ ಎಚ್.ಡಿ.ದೇವೇಗೌಡ, ಎಚ್​ಡಿ ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಾರದು. ಸತ್ಯಾಂಶವಿದ್ದು, ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ನ್ಯಾಯಾಲಯ ಆದೇಶ ಹೊರಡಿಸಿದೆ.

Advertisement

Advertisement
Tags :
Advertisement