ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಧಾರ್ಮಿಕ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ: ಪುತ್ತಿಗೆ ಶ್ರೀ

ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು. ಈ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ ಎಂದು ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.
07:03 AM Jan 09, 2024 IST | Ramya Bolantoor

ಉಡುಪಿ: ಧಾರ್ಮಿಕ ವಿಚಾರ ಧಾರ್ಮಿಕ ವ್ಯಕ್ತಿಗಳಿಗೆ ಸಂಬಂಧಪಟ್ಟದ್ದು. ಈ ವಿಚಾರದಲ್ಲಿ ನ್ಯಾಯಾಲಯಗಳ ಹಸ್ತಕ್ಷೇಪ ಸರಿಯಲ್ಲ ಎಂದು ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಸ್ವಾಮೀಜಿ ಹೇಳಿದರು.

Advertisement

ಪುತ್ತಿಗೆ ಮಠದ ಪರ್ಯಾಯ ವಿರುದ್ಧ ಪಿಎಎಲ್ ಅರ್ಜಿ ವಜಾ ಕುರಿತು ಉಡುಪಿಯಲ್ಲಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೃಷ್ಣನ ಅನುಗ್ರಹ ಇದ್ದರೆ ಎಲ್ಲವೂ ಒಳ್ಳೆಯದಾಗುತ್ತದೆ. ನ್ಯಾಯಮೂರ್ತಿಗಳು ಒಳ್ಳೆಯ ವಿಚಾರವನ್ನೇ ಹೇಳಿದ್ದಾರೆ. ನಾವು ಯಾವುದೇ ದೈಶಿಕ ವಿಚಾರಕ್ಕೆ ಒಳಪಟ್ಟವರಲ್ಲ. ಆಧ್ಯಾತ್ಮಿಕ ವಿಚಾರ ಗಡಿ ದಾಟಿ ಇರಬೇಕು. ಅದಕ್ಕೆ ಯಾವುದೇ ಬ್ಯಾರಿಗೇಟ್ ಇರಬಾರದು, ಒಳ್ಳೆಯ ವಿಚಾರ ಎಲ್ಲಾ ಕಡೆ ಪಸರಿಸಬೇಕು. ದೈಶಿಕ ನಿರ್ಬಂಧಕ್ಕೆ ಧಾರ್ಮಿಕ ವಿಚಾರ ಒಳಗಾಗಬಾರದು ಎಂದರು.
ಇನ್ನು ಸದ್ವಿಚಾರಗಳು ಪ್ರಪಂಚದಲ್ಲಿ ವ್ಯಾಪ್ತವಾಗಬೇಕು. ಆಧ್ಯಾತ್ಮಿಕ ವಿಚಾರ ವಿಶ್ವವ್ಯಾಪಿ ಆಗಬೇಕು. ಧರ್ಮ ಎನ್ನುವುದು ದೇಶಾತೀತ, ಪ್ರಪಂಚದಾದ್ಯಂತ ಹಿಂದುಗಳಿದ್ದಾರೆ ಎಂದು ಹೇಳಿದರು..

Advertisement
Advertisement
Tags :
LatestNewsNewsKannadaಉಡುಪಿ
Advertisement
Next Article