ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೊರೋನಾ ಪ್ರಕರಣ: ಆಸ್ಪತ್ರೆಗೆ ದಾಖಲಾದ 24 ಗಂಟೆ ಒಳಗೆ 7‌ ಮಂದಿ ಮೃತ್ಯು

ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ.
06:57 AM Jan 01, 2024 IST | Ramya Bolantoor

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಒಟ್ಟು ಸಾವಿನ ಸಂಖ್ಯೆ 12ಕ್ಕೆ ಏರಿಕೆಯಾಗಿದೆ. ಈ ಸಾವಿನ ಪೈಕಿ ಏಳು ಮಂದಿ ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಒಳಗಾಗಿ ಸಾವನ್ನಪ್ಪಿದ್ದು, ವಿಳಂಬವಾಗಿ ಆಸ್ಪತ್ರೆಗೆ ದಾಖಲು ಮಾಡಿರುವುದು ಸಾವಿನ ಪ್ರಮಾಣ ಹೆಚ್ಚಳವಾಗಲು ಕಾರಣವಾಗಿದೆ.

Advertisement

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿ.22ರಂದು ಆಸ್ಪತ್ರೆಗೆ ದಾಖಲಾಗಿದ್ದ 51 ವರ್ಷದ ವ್ಯಕ್ತಿ ಡಿ.23ರಂದು ಮೃತಪಟ್ಟಿದ್ದಾರೆ. ಹಾಸನದಲ್ಲಿ ಉಸಿರಾಟ ಸಮಸ್ಯೆಯಿಂದ ಡಿ.22ರಂದು ದಾಖಲಾಗಿದ್ದ ವ್ಯಕ್ತಿ ಡಿ.23ರಂದು ಮೃತಪಟ್ಟಿದ್ದರು. ಮತ್ತೊಬ್ಬ ವ್ಯಕ್ತಿ ಡಿ.25ರಂದು ದಾಖಲಾಗಿ ಅದೇ ದಿನ ಮೃತಪಟ್ಟರು. ಹೀಗೆ ಒಟ್ಟು ಏಳು ಮಂದಿ ಆಸ್ಪತ್ರೆಗೆ ದಾಖಲಾದ 24 ಗಂಟೆಗಳ ಒಳಗಾಗಿ ಮೃತಪಟ್ಟಿದ್ದಾರೆ. ಇದಕ್ಕೆ ವಿಳಂಬದ ದಾಖಲಾತಿಯೇ ಕಾರಣ ಎಂಬುದು ಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಕೊರೋನಾ ಸೋಂಕಿತರಿಗೆ 7 ದಿನಗಳ ಹೋಂ ಐಸೊಲೇಷನ್‌ ವಿಧಿಸಿದ್ದರೂ ವೈದ್ಯರು ಮನೆಯಲ್ಲೇ ರೋಗಿಯನ್ನು ಭೇಟಿ ಮಾಡಬೇಕು.ಅಗತ್ಯವಿರುವವರಿಗೆ ಸೂಕ್ತ ಸಮದಯಲ್ಲಿ ಆಸ್ಪತ್ರೆಗೆ ದಾಖಲಾಗಲು ಹೇಳಬೇಕು.

Advertisement

Advertisement
Tags :
COVID 19LatestNewsNewsKannadaಬೆಂಗಳೂರು
Advertisement
Next Article