ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ: ಕ್ರಿಕೆಟಿಗ ಸಂದೀಪ್ ಲಮಿಚಾನೆಗೆ ಜೈಲು

ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ  ಸಂದೀಪ್ ಲಮಿಚಾನೆ  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ.
11:10 AM Dec 30, 2023 IST | Ashika S

ದೆಹಲಿ: ನೇಪಾಳ ಕ್ರಿಕೆಟ್ ತಂಡದ ಮಾಜಿ ನಾಯಕ  ಸಂದೀಪ್ ಲಮಿಚಾನೆ  ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಸಾಬೀತಾಗಿದೆ.

Advertisement

ಶುಕ್ರವಾರ  ಈ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆದಿದ್ದು, ಕಠ್ಮಂಡು ಜಿಲ್ಲಾ ನ್ಯಾಯಾಲಯ ಸಂದೀಪ್ ಲಮಿಚಾನೆ ದೋಷಿ ಎಂದು ತೀರ್ಪು ನೀಡಿದೆ.

ಆಗಸ್ಟ್ 21 ರಂದು ಕಠ್ಮಂಡು ಜಿಲ್ಲಾ ನ್ಯಾಯಾಲಯದ ವಕೀಲರು 17 ವರ್ಷದ ಬಾಲಕಿಯ ವಿರುದ್ಧ ಅತ್ಯಾಚಾರ ಪ್ರಕರಣವನ್ನು ದಾಖಲಿಸಿದ್ದರು. ಕ್ರಿಮಿನಲ್ ಕೋಡ್ 2074 ರ ಸೆಕ್ಷನ್ 219 ರ ಅಡಿಯಲ್ಲಿ ಸಂದೀಪ್ ವಿರುದ್ಧ ಆರೋಪ ಹೊರಿಸಲಾಗಿದೆ.

Advertisement

ಸಂದೀಪ್ ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ಆಡಿದ್ದರು. ಈ ಲೀಗ್‌ನಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಪ್ರತಿನಿಧಿಸಲಿದ್ದರು. ನೇಪಾಳ ಪೊಲೀಸರು ಅವರನ್ನು ಅಕ್ಟೋಬರ್ 6 ರಂದು ಬಂಧಿಸಿದ್ದರು.

ಅಪ್ರಾಪ್ತ ಬಾಲಕಿ ಸಂದೀಪ್ ವಿರುದ್ಧ 6 ಸೆಪ್ಟೆಂಬರ್ 2022 ರಂದು ಗೌಶಾಲ್ ಮೆಟ್ರೋಪಾಲಿಟನ್ ಪೊಲೀಸ್ ವೃತ್ತದಲ್ಲಿ ಪ್ರಕರಣ ದಾಖಲಿಸಿದ್ದಳು.

ಈ ಪ್ರಕರಣದಲ್ಲಿ ಸಂದೀಪ್‌ಗೆ ಎಷ್ಟು ವರ್ಷ ಶಿಕ್ಷೆ ವಿಧಿಸಲಾಗುತ್ತದೆ ಎಂಬುದನ್ನು ನ್ಯಾಯಾಧೀಶರು ಬಹಿರಂಗಪಡಿಸಿಲ್ಲ. ಮುಂದಿನ ವಿಚಾರಣೆಯಲ್ಲಿ ಈ ಬಗ್ಗೆ ನಿರ್ಧಾರವಾಗಲಿದೆ.

Advertisement
Tags :
LatetsNewsNewsKannadaಅತ್ಯಾಚಾರಅಪ್ರಾಪ್ತ ಬಾಲಕಿಆರೋಪಕ್ರಿಕೆಟ್ ತಂಡಸಂದೀಪ್ ಲಮಿಚಾನೆ
Advertisement
Next Article