ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ತಂದೆ ತಾಯಿಯನ್ನು ವೃದ್ಧಾಶ್ರಮಕ್ಕೆ ಹಾಕುತ್ತಿರುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ

ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ  ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.
06:27 PM Jan 07, 2024 IST | Ashika S

ಬೆಂಗಳೂರು: ತಂದೆ ತಾಯಿಯನ್ನು ಸರಿಯಾಗಿ ನೋಡಿಕೊಳ್ಳಲದೆ ಅವರನ್ನು ಮಕ್ಕಳು ವೃದ್ಧಾಶ್ರಮಕ್ಕೆ  ಹಾಕುತ್ತಿರುವ ಪ್ರಕರಣಗಳು ನಗರದಲ್ಲಿ ಹೆಚ್ಚಾಗಿ ನಡೆಯುತ್ತಿವೆ. ಹೀಗಾಗಿ ಪೋಷಕರನ್ನು ವೃದ್ಧಾಶ್ರಮಕ್ಕೆ ಹಾಕುವ ಮಕ್ಕಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿದ್ದಾರೆ.

Advertisement

ನಗರ ಪೊಲೀಸ್ ಆಯುಕ್ತ ಬಿ.ದಯಾನಂದ  ಅವರ ಸೂಚನೆ ಮೇರೆಗೆ  ಬೆಂಗಳೂರು ಪೊಲೀಸರು ಮಹತ್ಕಾರ್ಯಕ್ಕೆ ಕೈ ಹಾಕಿದ್ದಾರೆ.

ನಗರದ ವೃದ್ಧಾಶ್ರಮಗಳ ಮೇಲೆ‌ ಕಣ್ಣಿಟ್ಟಿರುವ ನಗರ ಪೊಲೀಸರು, ತಂದೆ ತಾಯಿಯನ್ನ ಸರಿಯಾಗಿ ನೋಡಿಕೊಳ್ಳದ ಮಕ್ಕಳ ಮೇಲೆ ಸುಪ್ರೀಂ ಕೋರ್ಟ್ ಆದೇಶದ ಅನ್ವಯ ಕೇಸ್ ಬುಕ್ ಮಾಡುವಂತೆ ಪೊಲೀಸ್ ಕಮೀಷನರ್ ಬಿ. ದಯಾನಂದ್ ಸೂಚನೆ ನೀಡಿದ್ದಾರೆ

Advertisement

ವೃದ್ಧಾಶ್ರಮಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು, ತಮ್ಮ ಪೋಷಕರನ್ನು ವೃದ್ಧಾಶ್ರಮಕ್ಕೆ ಸೇರಿಸಿರುವ ಆರ್ಥಿಕವಾಗಿ ಶಕ್ತರಾಗಿರುವ ಮಕ್ಕಳನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ವೃದ್ಧಾಶ್ರಮಗಳಿಂದ ತಮ್ಮ ಪೋಷಕರನ್ನು ಕರೆದೊಯ್ಯುವಂತೆ ಸೂಚನೆ ನೀಡಿದ್ದಾರೆ. ಆ ಮೂಲಕ ತಂದೆ ತಾಯಿಯನ್ನು ಮನೆಗೆ ವಾಪಸ್ ಕಳುಹಿಸಿ ಇಳಿ ವಯಸ್ಸಿನಲ್ಲಿ ಮಕ್ಕಳು ಮೊಮ್ಮಕ್ಕಳೊಂದಿಗೆ ಸಂತೋಷದಿಂದ ಇರುವಂತೆ ಮಾಡಲು ಪೊಲೀಸರು ಮುಂದಾಗಿದ್ದಾರೆ.

Advertisement
Tags :
LatetsNewsNewsKannadaಕ್ರಿಮಿನಲ್ ಪ್ರಕರಣತಂದೆ ತಾಯಿಪೋಷಕರುಪ್ರಕರಣಮಕ್ಕಳುವೃದ್ಧಾಶ್ರಮ
Advertisement
Next Article