ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಸನಾತನ ಧರ್ಮಕ್ಕೆ ಅವಮಾನ: ಸಚಿವ ಉದಯನಿಧಿ ಸ್ಟಾಲಿನ್‌ ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್‌ ಪ್ರಕರಣ

ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ.
11:17 AM Feb 03, 2024 IST | Ashika S

ಬೆಂಗಳೂರು: ಸನಾತನ ಧರ್ಮಕ್ಕೆ ಅವಮಾನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ತಮಿಳುನಾಡಿನ ಸಚಿವ ಉದಯನಿಧಿ ಸ್ಟಾಲಿನ್‌ ಸೇರಿ ನಾಲ್ವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಬೆಂಗಳೂರಿನ ಮೆಟ್ರೊಪಾಲಿಟನ್‌ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ ಆದೇಶಿಸಿದೆ.

Advertisement

ತಮಿಳುನಾಡಿನ ಯುವ ಜನ ಕ್ಷೇಮಾಭಿವೃದ್ಧಿ, ಕ್ರೀಡೆ ಮತ್ತು ಪ್ರವಾಸೋದ್ಯಮ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್‌, ತಮಿಳುನಾಡಿನ ಬರಹಗಾರ ಎಸ್‌ ವೆಂಕಟೇಶ್‌, ತಮಿಳುನಾಡಿನ ಪ್ರಗತಿಪರ ಬರಹಗಾರರು ಮತ್ತು ಕಲಾವಿದರ ಸಂಘದ ರಾಜ್ಯಾಧ್ಯಕ್ಷ ಮಧುಕರ್‌ ರಾಮಲಿಂಗಂ ಮತ್ತು ಸಂಘದ ಕಾರ್ಯದರ್ಶಿ ಆದವನ್‌ ಡಿಚನ್ಯ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 153, 298, 500 ಜೊತೆಗೆ 34ರ ಅಡಿ ಕ್ರಿಮಿನಲ್‌ ಪ್ರಕರಣ ದಾಖಲಿಸಲು ಕಚೇರಿಗೆ ನಿರ್ದೇಶಿಸಲಾಗಿದೆ.

ಆರೋಪಿಗಳಿಗೆ ಸಮನ್ಸ್‌ ಜಾರಿ ಮಾಡಿ, ಮಾರ್ಚ್‌ 4ಕ್ಕೆ ವಿಚಾರಣೆ ಮುಂದೂಡಲಾಗಿದೆ.

Advertisement

ಬೆಂಗಳೂರಿನ ವಿ ಪರಮೇಶ ಅವರು ಸಲ್ಲಿಸಿದ್ದ ಖಾಸಗಿ ದೂರಿನ ವಿಚಾರಣೆ ನಡೆಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಜೆ ಪ್ರೀತ್‌ ಅವರು ಈ ಕುರಿತಾದ ಆದೇಶ ಮಾಡಿದ್ದಾರೆ.

ಪ್ರಕರಣದ ಏನು: 2023ರ ಸೆಪ್ಟೆಂಬರ್‌ 4ರಂದು ಚೆನ್ನೈನ ತೇನಂಪೇಟೆಯಲ್ಲಿ ನಡೆದಿದ್ದ ಸನಾತನ ಧರ್ಮ ನಿರ್ಮೂಲನಾ ಸಮಾವೇಶದಲ್ಲಿ ಸನಾತನ ಧರ್ಮವನ್ನು ಡೆಂಗ್ಯು, ಮಲೇರಿಯಾ ಹಾಗೂ ಕೊರೊನಾಕ್ಕೆ ಹೋಲಿಕೆ ಮಾಡಿ ಸಂಪೂರ್ಣ ನಿರ್ಮೂಲನೆ ಮಾಡಬೇಕು ಎಂದು ಉದಯನಿಧಿ ಹೇಳಿದ್ದರು.

Advertisement
Tags :
LatetsNewsNewsKannadaಅವಮಾನಉದಯನಿಧಿ ಸ್ಟಾಲಿನ್‌ಕ್ರಿಮಿನಲ್ನ್ಯಾಯಾಲಯಸಚಿವಸನಾತನ ಧರ್ಮ
Advertisement
Next Article