ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿ. 30ರಂದು ಅಹಿಂದ ಸಮಾವೇಶ: ಶಕ್ತಿ ಪ್ರದರ್ಶನಕ್ಕೆ ಮುಂದಾದ ಸಿದ್ದರಾಮಯ್ಯ ಬೆಂಬಲಿಗರು

ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಬಲಿಗರು ಡಿಸೆಂಬರ್ 30ರಂದು ಚಿತ್ರದುರ್ಗದಲ್ಲಿ  ಅಹಿಂದ ಸಮಾವೇಶ ನಡೆಸಿ ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ. 
10:50 AM Dec 17, 2023 IST | Ashika S

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಬಲಿಗರು ಡಿಸೆಂಬರ್ 30ರಂದು ಚಿತ್ರದುರ್ಗದಲ್ಲಿ  ಅಹಿಂದ ಸಮಾವೇಶ ನಡೆಸಿ ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದಾರೆ.

Advertisement

ಮತ್ತೊಂದೆಡೆ ಕಾಂಗ್ರೆಸ್​ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್  ಅವರು ಕೂಡ ಜನವರಿ ತಿಂಗಳಿನಲ್ಲೇ ಸಮಾವೇಶ ನಡೆಸಲು ತಯಾರಿ ನಡೆಸಿದ್ದಾರೆ.

ಸಿದ್ದರಾಮೋತ್ಸವ ಮಾದರಿಯಲ್ಲೇ ಮತ್ತೊಂದು ಬೃಹತ್ ಸಮಾವೇಶ ನಡೆಸಲು ಸಿದ್ದರಾಮಯ್ಯ ಬಣ ಸಿದ್ಧತೆ ಮಾಡಿಕೊಳ್ಳುತ್ತಿದೆ. ಸುಮಾರು ಹತ್ತು ಲಕ್ಷ ಜನರನ್ನು ಸೇರಿಸುವ ಮೂಲಕ ಶಕ್ತಿ ಪ್ರದರ್ಶನಕ್ಕೆ ಅಹಿಂದ ನಾಯಕರು ಮುಂದಾಗಿದ್ದಾರೆ.

Advertisement

ಜಾತಿ ಜನಗಣತಿ ಜಾರಿಗೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಡಿಸೆಂಬರ್ 30 ರಂದು ಸಿದ್ದರಾಮಯ್ಯ ಅವರ ಆಪ್ತರು ಬೃಹತ್ ಸಮಾವೇಶಕ್ಕೆ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.  ಅಹಿಂದ ಸಮಾವೇಶ, ಸಿದ್ದರಾಮೋತ್ಸವ ಸೇರಿದಂತೆ ಹಲವಾರು ಕಾರ್ಯಕ್ರಮಗಳ ಮೂಲಕ ಸಿದ್ದರಾಮಯ್ಯ ಬಲವರ್ಧನೆಗೆ ಸಿದ್ದರಾಮಯ್ಯ ಆಪ್ತರು ವೇದಿಕೆ ಸಿದ್ಧಪಡಿಸುತ್ತಿದ್ದಾರೆ.

ಜನವರಿಯಲ್ಲಿ ಮತ್ತೊಂದು ಸುತ್ತಿನ ಬೃಹತ್ ಹಿಂದುಳಿದ ಸಮಾವೇಶ ನಡೆಸಲು ಹರಿಪ್ರಸಾದ್ ಸಿದ್ಧತೆ ನಡೆಸುತ್ತಿದ್ದಾರೆ. ಆ ಮೂಲಕ ತಮ್ಮ ವಿರೋಧಿಗಳಿಗೆ ಸ್ಪಷ್ಟ ಸಂದೇಶ ರವಾನಿಸಲು ಸಜ್ಜಾಗುತ್ತಿದ್ದಾರೆ.

Advertisement
Tags :
LatetsNewsNewsKannadaಅಹಿಂದ ಸಮಾವೇಶಬೆಂಬಲಿಗರುಮುಖ್ಯಮಂತ್ರಿಶಕ್ತಿ ಪ್ರದರ್ಶನಸಿದ್ದರಾಮಯ್ಯ
Advertisement
Next Article