For the best experience, open
https://m.newskannada.com
on your mobile browser.
Advertisement

ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ ಗುಕೇಶ್

ಟೊರೆಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಅಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನಿಸಿಕೊಂಡಿದ್ದಾರೆ.
10:52 AM Apr 22, 2024 IST | Ashitha S
ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿ ಗೆದ್ದು ಇತಿಹಾಸ ನಿರ್ಮಿಸಿದ ಗುಕೇಶ್

ಟೊರೆಂಟೊದಲ್ಲಿ ನಡೆದ ಕ್ಯಾಂಡಿಡೇಟ್ಸ್ ಚೆಸ್ ಟೂರ್ನಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಡಿ ಗುಕೇಶ್ ಚಾಂಪಿಯನ್ ಅಗಿ ಹೊರಹೊಮ್ಮಿದ್ದಾರೆ. ಈ ಮೂಲಕ ಈ ಸಾಧನೆ ಮಾಡಿದ ವಿಶ್ವದ ಅತ್ಯಂತ ಕಿರಿಯ ಚೆಸ್ ಚತುರ ಎನಿಸಿಕೊಂಡಿದ್ದಾರೆ.

Advertisement

ಅಲ್ಲದೆ ಕ್ಯಾಂಡಿಡೇಟ್ ಚೆಸ್ ಸ್ಪರ್ಧೆಯನ್ನು ಗೆದ್ದ 2ನೇ ಭಾರತೀಯ ಎಂಬ ಹೆಗ್ಗಳಿಕೆಗೂ ಗುಕೇಶ್ ಪಾತ್ರರಾಗಿದ್ದಾರೆ. ಇದಕ್ಕೂ ಮುನ್ನ 2014 ರಲ್ಲಿ 5 ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಈ ಸಾಧನೆ ಮಾಡಿದ್ದರು.

ಕ್ಯಾಂಡಿಡೇಟ್ ಚೆಸ್ ಟೂರ್ನಿಯ ಅಂತಿಮ ಹಣಾಹಣಿಯಲ್ಲಿ ಅಮೆರಿಕದ ಹಿಕರು ನಕಮುರಾ ವಿರುದ್ಧ ಕೊನೆಯ ಸುತ್ತಿನಲ್ಲಿ ಗುಕೇಶ್ ಡ್ರಾ ಮಾಡಿಕೊಳ್ಳುವಲ್ಲಿ ಯಶಸ್ವಿಯಾದರು. ಈ ಮೂಲಕ 14 ಪಾಯಿಂಟ್ಸ್​ಗಳಲ್ಲಿ ಒಂಬತ್ತು ಅಂಕಗಳನ್ನು ಸಂಪಾದಿಸಿ ಅಗ್ರಸ್ಥಾನ ಪಡೆದುಕೊಂಡರು.

Advertisement

ಈ ಗೆಲುವಿನೊಂದಿಗೆ 17 ವರ್ಷದ ಗ್ರ್ಯಾಂಡ್‌ಮಾಸ್ಟರ್ ಡಿ ಗುಕೇಶ್ ಅವರು ಪ್ರತಿಷ್ಠಿತ ಕ್ಯಾಂಡಿಡೇಟ್ಸ್ ಪಂದ್ಯಾವಳಿಯನ್ನು ಗೆದ್ದ ಅತ್ಯಂತ ಕಿರಿಯ ಸ್ಪರ್ಧಿ ಎಂಬ ಹೆಗ್ಗಳಿಕೆಗೆ ಪಾತ್ರರಾದರು. ಅಲ್ಲದೆ ವರ್ಷದ ಕೊನೆಯ ತ್ರೈಮಾಸಿಕದಲ್ಲಿ ಹಾಲಿ ವಿಶ್ವ ಚಾಂಪಿಯನ್ ಚೀನಾದ ಡಿಂಗ್ ಲಿರೆನ್ ವಿರುದ್ಧ ಸ್ಪರ್ಧಿಸಲು ಅರ್ಹತೆ ಪಡೆದುಕೊಂಡಿದ್ದಾರೆ.

Advertisement
Tags :
Advertisement