ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಡಿ. 24ರಂದು ಉಡುಪಿ ನಾರ್ತ್ ಶಾಲೆಯ ಶತಮಾನೋತ್ಸವ

ಉಡುಪಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನಾರ್ತ್)ಯ ಶತಮಾನೋತ್ಸವ ಸಮಾರಂಭವು ಇದೇ ಡಿ. 24ರಂದು ನಡೆಯಲಿದೆ ಎಂದು ನಾರ್ತ್ ಶಾಲೆ ಹಳೆ ವಿದ್ಯಾರ್ಥಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಜೊತೆ ಕಾರ್ಯದರ್ಶಿ ಶುಭ ರಾವ್ ತಿಳಿಸಿದರು.
10:41 AM Dec 11, 2023 IST | Ramya Bolantoor

ಉಡುಪಿ: ಉಡುಪಿ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ (ನಾರ್ತ್)ಯ ಶತಮಾನೋತ್ಸವ ಸಮಾರಂಭವು ಇದೇ ಡಿ. 24ರಂದು ನಡೆಯಲಿದೆ ಎಂದು ನಾರ್ತ್ ಶಾಲೆ ಹಳೆ ವಿದ್ಯಾರ್ಥಿ ಹಾಗೂ ಶಾಲಾಭಿವೃದ್ಧಿ ಸಮಿತಿಯ ಜೊತೆ ಕಾರ್ಯದರ್ಶಿ ಶುಭ ರಾವ್ ತಿಳಿಸಿದರು.
ಉಡುಪಿಯಲ್ಲಿ‌ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 8:30ರಿಂದ ಅಪರಾಹ್ನ 1:30ರವರೆಗೆ ಶಾಲಾ ವಾರ್ಷಿಕೋತ್ಸವ ಹಾಗೂ ಶತಮಾನೋತ್ಸವ ಆಚರಣೆ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕ ಯಶಪಾಲ್ ಸುವರ್ಣ ಹಾಗೂ ಇತರ ಗಣ್ಯರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.

Advertisement

ಮಧ್ಯಾಹ್ನ 3:30ರಿಂದ ಶಾಲಾ ಹಳೆ ವಿದ್ಯಾರ್ಥಿಗಳಿಂದ ಶತಮಾನೋತ್ಸವದ ಅಂಗವಾಗಿ ಗುರುವಂದನೆ ಕಾರ್ಯಕ್ರಮ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ. ಡಿ.17ರಂದು ಶಾಲಾ ವಿದ್ಯಾರ್ಥಿಗಳಿಗೆ ಹಾಗೂ ಹಳೆ ವಿದ್ಯಾರ್ಥಿಗಳಿಗೆ ಕ್ರೀಡಾಕೂಟವನ್ನೂ ಆಯೋಜಿಸಲಾಗಿದೆ ಎಂದು ಮಾಹಿತಿ ನೀಡಿದರು. ಈ ಶಾಲೆಯಲ್ಲಿ ಅನೇಕ ಹಿರಿಯ ಮಠಾಧೀಶರುಗಳು, ಉಡುಪಿಯ ಅನೇಕ ಗಣ್ಯರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ಬದುಕಿನ ಪ್ರಾಥಮಿಕ ಹಂತದ ಶಿಕ್ಷಣವನ್ನು ಇಲ್ಲೇ ಪಡೆದಿದ್ದಾರೆ. ಶತಮಾನೋತ್ಸವದ ಸಂಭ್ರಮದಲ್ಲಿ ಕಳೆದೊಂದು ವರ್ಷದಿಂದ ಶಾಲೆಯ ಹಳೆ ವಿದ್ಯಾರ್ಥಿಗಳು, ಶಿಕ್ಷಕರು, ಹಿತೈಷಿಗಳು ಹಾಗೂ ದಾನಿಗಳ ನೆರವಿನಿಂದ ಶಾಲೆಯಲ್ಲಿ ಹಂತ ಹಂತವಾಗಿ ಅನೇಕ ಅಭಿವೃದ್ಧಿ ಕಾರ್ಯಗಳನ್ನು ನಡೆಸಲಾಗುತ್ತಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಸಮಿತಿಯ ಅಧ್ಯಕ್ಷ ಸತೀಶ್ ರಾವ್ ಮಂಚಿ, ಉಪಾಧ್ಯಕ್ಷ ರಂಜನ್ ಭಾಗವತ್, ನಗರಸಭಾ ಸದಸ್ಯೆ ಮಾನಸ ಸಿ.ಪೈ ಹಾಗೂ ಶಾಲಾ ಮುಖ್ಯೋಪಾಧ್ಯಾಯನಿ ವಸಂತಿ ಬಿ. ಉಪಸ್ಥಿತರಿದ್ದರು.

Advertisement

Advertisement
Tags :
KARNATAKALatestNewsNewsKannadaಉಡುಪಿ
Advertisement
Next Article