For the best experience, open
https://m.newskannada.com
on your mobile browser.
Advertisement

ಲೋಕಸಭಾ ಚುನಾವಣೆಗೆ ಟಿಕೇಟ್‌ ಮಿಸ್‌: ‘ಟ್ವಿಟರ್‌’ನಲ್ಲಿ ಭಾವುಕ ಪತ್ರ ಬರೆದ ಡಿ.ವಿ. ಎಸ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕಟ್‌ ಮಿಸ್‌ ಆಗಿದೆ. ಅವರು ಈ ಬಾರಿ ಬೆಂಗಳೂರು ಉತ್ತರದಿಂದ ಕಣಕ್ಕೆ ಇಳಿಯಲು ಬೇರೆಯವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.
06:23 PM Mar 13, 2024 IST | Ashika S
ಲೋಕಸಭಾ ಚುನಾವಣೆಗೆ ಟಿಕೇಟ್‌ ಮಿಸ್‌  ‘ಟ್ವಿಟರ್‌’ನಲ್ಲಿ ಭಾವುಕ ಪತ್ರ ಬರೆದ ಡಿ ವಿ  ಎಸ್

ಬೆಂಗಳೂರು: ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮಾಜಿ ಸಿಎಂ ಹಾಗೂ ಹಾಲಿ ಬಿಜೆಪಿ ಸಂಸದ ಡಿ.ವಿ. ಸದಾನಂದ ಗೌಡ ಅವರಿಗೆ ಟಿಕೆಟ್ ಮಿಸ್‌ ಆಗಿದೆ. ಅವರು ಈ ಬಾರಿ ಬೆಂಗಳೂರು ಉತ್ತರದಿಂದ ಕಣಕ್ಕೆ ಇಳಿಯಲು ಬೇರೆಯವರನ್ನು ಆಯ್ಕೆ ಮಾಡಲಾಗಿದೆ ಎನ್ನಲಾಗಿದೆ.

Advertisement

ಇವರ ಸ್ಥಾನಕ್ಕೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್‌ ನೀಡಬಹುದು ಎನ್ನಲಾಗಿದೆ. ಈಗಾಗಲೇ ಡಿ.ವಿ. ಸದಾನಂದ ಗೌಡ ಅವರಿಗೆ ಕಾಲ್‌ ಮಾಡಿ ಹೈಕಮಾಂಡ್‌ ಮಾಹಿತಿ ನೀಡಿದೆ ಎನ್ನಲಾಗಿದೆ. ಈ ನಡುವೆ ಈ ಬಗ್ಗೆ ಅವರು ಟ್ವಿಟರ್‌ನಲ್ಲಿ ಮಾಹಿತಿಯನ್ನು ನೀಡಿದ್ದಾರೆ.

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ನನ್ನೆಲ್ಲಾ ಪ್ರೀತಿಯ ಬಂಧುಗಳೇ,
ನನಗೆ ಕಳೆದ ಹತ್ತು ವರ್ಷಗಳ ಕಾಲ ಈ ಕ್ಷೇತ್ರದ ಲೋಕಸಭಾ ಸದಸ್ಯನಾಗಿ, ನಿಮ್ಮ ಕೆಲಸ ಮಾಡುವ ಅವಕಾಶವನ್ನು ಮಾಡಿಕೊಟ್ಟು ಆಶೀರ್ವಾದವನ್ನು ಮಾಡಿದ್ದೀರಿ. ನಾನು ನನ್ನ ಶಕ್ತಿಮೀರಿ ನಿಮ್ಮ ಸೇವೆಯನ್ನು ಮಾಡುವ ಪ್ರಯತ್ನವನ್ನು ಮಾಡಿದ್ದೇನೆ. ನಿಮ್ಮ ಆಶೀರ್ವಾದದಿಂದ ಕೇಂದ್ರದಲ್ಲಿ ನಮ್ಮೆಲ್ಲರ ಪ್ರೀತಿಯ ಪ್ರಧಾನ ಮಂತ್ರಿ  ಶ್ರೀ ನರೇಂದ್ರ ಮೋದಿ ಅವರ ಜೊತೆಯಲ್ಲಿ 7 ವರ್ಷಗಳ ಕಾಲ ಕ್ಯಾಬಿನೆಟ್ ಮಂತ್ರಿಯಾಗಿ ಕೆಲಸ ಮಾಡುವ ಅವಕಾಶವನ್ನು ಕೂಡ ಕಲ್ಪಿಸಿದ್ದೀರಿ. ನಾನು ನಿಮ್ಮೆಲ್ಲರಿಗೂ ಚಿರಋಣಿ. ನಿಮ್ಮ ಜೊತೆಗೆ ಇನ್ನು ಮುಂದೆಯೂ ಇರುತ್ತೇನೆ. ಎಲ್ಲರಿಗೂ ನನ್ನ ಅಂತರಾಳದ ಹೃದಯ ತುಂಬಿದ ಧನ್ಯವಾದಗಳು.

Advertisement

ಇಂತಿ ನಿಮ್ಮವನೇ ಆದ
ಡಿ.ವಿ. ಸದಾನಂದ ಗೌಡ

Advertisement
Tags :
Advertisement