For the best experience, open
https://m.newskannada.com
on your mobile browser.
Advertisement

ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಥೆಯಲ್ಲಿ ಧನಂಜಯ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಚಿತ್ರತಂಡ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ.
12:52 PM May 19, 2024 IST | Ashitha S
ಐತಿಹಾಸಿಕ ʻಹಲಗಲಿʼ ಕಥೆಗೆ ನಾಯಕನಾದ ನಟರಾಕ್ಷಸ ಧನಂಜಯ್

ಐತಿಹಾಸಿಕ ಕಥೆಯ ʻಹಲಗಲಿʼ ಸಿನಿಮಾಗೆ ನಟ ಡಾಲಿ ಧನಂಜಯ್‌ ನಾಯಕನಾಗಿ ಆಯ್ಕೆಯಾಗಿದ್ದಾರೆ. 'ಕೃಷ್ಣ ತುಳಸಿ' ಚಿತ್ರದ ಖ್ಯಾತ ಡೈರೆಕ್ಟರ್‌ ಸುಕೇಶ್‌ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಕಥೆಯಲ್ಲಿ ಧನಂಜಯ್‌ ಮುಖ್ಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಸದ್ಯ ಚಿತ್ರತಂಡ ಮಾತುಕತೆ ನಡೆಸುತ್ತಿದೆ ಎನ್ನಲಾಗಿದೆ.

Advertisement

ಹಲಗಲಿ ಚಿತ್ರಕಥೆ ಸ್ವಾತಂತ್ರ್ಯ ಸಂಗ್ರಾಮದ ವೇಳೆಯಲ್ಲಿ ಬ್ರಿಟಿಷರಿಗೆ ಗೆರಿಲ್ಲಾ ವಾರ್‌ಫೇರ್‌ ಮೂಲಕ ಸಿಂಹಸ್ವಪ್ನವಾಗಿ ಕಾಡಿದ ಹಲಗಲಿ ಬೇಡರ ಕುರಿತಾದ ಕಥಾಹಂದರ ಹೊಂದಿದೆ. 1857ರಲ್ಲಿ ಮೊದಲ ಸ್ವಾತಂತ್ರ್ಯ ಸಂಗ್ರಾಮದ ಸಮಯದಲ್ಲಿ ಕಿಚ್ಚು ಹತ್ತಿಕೊಂಡಾಗ ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲೂಕಿನ ಹಲಗಲಿ ಗ್ರಾಮದ ಬೇಡರು ಬ್ರಿಟಿಷರ ವಿರುದ್ಧ ಹೋರಾಟಕ್ಕೆ ನಿಂತಿದ್ದರು. ಈ ವಿಷಯದ ಕುರಿತಾಗಿ ಈ ಸಿನಿಮಾ ಮೂಡಿಬರಲಿದೆ.

ಈಗಾಗಲೇ ʻಹಲಗಲಿʼ ಚಿತ್ರದ ಮುಹೂರ್ತ ನೆರವೇರಿದ್ದು, ಒಂದು ಹಂತದ ಶೂಟಿಂಗ್‌ ಸಹ ಮಾಡಲಾಗಿದೆ ಎನ್ನಲಾಗಿದೆ. ಈ ಚಿತ್ರಕ್ಕೆ ಮೊದಲು ಡಾರ್ಲಿಂಗ್‌ ಕೃಷ್ಣ ಹೀರೋ ಆಗಿ ಆಯ್ಕೆಯಾಗಿದ್ದರು. ಆದರೆ ಡೇಟ್‌ ಸಮಸ್ಯೆಯಿಂದ ಈ ಬಿಗ್‌ ಬಜೆಟ್‌ ಪ್ರಾಜೆಕ್ಟ್‌ನಿಂದ ಹೊರನಡೆದರು.

Advertisement

Advertisement
Tags :
Advertisement