For the best experience, open
https://m.newskannada.com
on your mobile browser.
Advertisement

ಮಲೆಮಹದೇಶ್ವರ ಬೆಟ್ಟಕ್ಕೆ ಡಾಲಿ ಧನಂಜಯ್ ಭೇಟಿ

ಜಿಲ್ಲೆಯ ಯಾತ್ರಾಸ್ಥಳವಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಹಿಂತಿರುಗುತ್ತಾರೆ. ಈ ನಡುವೆ ನಟ ಡಾಲಿ ಧನಂಜಯ್ ಅವರು ತಮ್ಮ ಸ್ನೇಹಿತರ ಜೊತೆಗೂಡಿ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದರು.
10:26 PM Jan 08, 2024 IST | Ashika S
ಮಲೆಮಹದೇಶ್ವರ ಬೆಟ್ಟಕ್ಕೆ ಡಾಲಿ ಧನಂಜಯ್ ಭೇಟಿ

ಚಾಮರಾಜನಗರ: ಜಿಲ್ಲೆಯ ಯಾತ್ರಾಸ್ಥಳವಾಗಿರುವ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟಕ್ಕೆ ಪ್ರತಿನಿತ್ಯ ಸಹಸ್ರಾರು ಪ್ರವಾಸಿಗರು ಆಗಮಿಸಿ ಮಾದಪ್ಪನ ದರ್ಶನ ಪಡೆದು ಹಿಂತಿರುಗುತ್ತಾರೆ. ಈ ನಡುವೆ ನಟ ಡಾಲಿ ಧನಂಜಯ್ ಅವರು ತಮ್ಮ ಸ್ನೇಹಿತರ ಜೊತೆಗೂಡಿ ಬೆಟ್ಟಕ್ಕೆ ತೆರಳಿ ಮಾದಪ್ಪನ ದರ್ಶನ ಪಡೆದರು.

Advertisement

ಈ ವೇಳೆ ದೇಗುಲಕ್ಕೆ ಬಂದಿದ್ದ ಭಕ್ತರು ನೆಚ್ಚಿನ ನಟನನ್ನು ಹತ್ತಿರದಿಂದ ನೋಡಿ ಖುಷಿಪಟ್ಟರು.

ಇದೇ ವೇಳೆ ಮಲೆಮಹದೇಶ್ವರ ಬೆಟ್ಟಕ್ಕೆ ಡಾಲಿ ಧನಂಜಯ್ ಹಾಗೂ ನಾಗಭೂಷಣ್ ಮತ್ತಿತರರು ನೆರೆದಿದ್ದ ಭಕ್ತರತ್ತ ಕೈಬೀಸಿದರಲ್ಲದೆ, ದೇಗುಲಕ್ಕೆ ಭೇಟಿ ನೀಡಿ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದಾಧ ಬಳಿಕ ಕ್ಷೇತ್ರದ ಸಾಲೂರು ಬೃಹನ್ಮಠಕ್ಕೆ ಭೇಟಿ ನೀಡಿ ಶಾಂತ ಮಲ್ಲಿಕಾರ್ಜುನ ಸ್ವಾಮಿಗಳ ಆಶೀರ್ವಾದ ಪಡೆದರು. ಜೊತೆಗೆ ಮಲೆಮಹದೇಶ್ವರ ಬೆಟ್ಟದಲ್ಲಿರುವ 108 ಅಡಿ ಎತ್ತರದ ಮಾದಪ್ಪನ ಪ್ರತಿಮೆ ಜೊತೆ ಡಾಲಿ ಫೋಟೋ ಕ್ಲಿಕ್ಕಿಸಿಕೊಂಡು ಗಮನಸೆಳೆದರು.

Advertisement

Advertisement
Tags :
Advertisement