ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕರಾವಳಿಯ ದೇಗುಲಗಳಲ್ಲಿ ಮುಂದುವರಿದ ವ್ಯಾಪಾರ ಧರ್ಮ ದಂಗಲ್

ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ಮುಂದುವರಿದಿದೆ.
02:47 PM Dec 15, 2023 IST | Ramya Bolantoor

ಸುಬ್ರಹ್ಮಣ್ಯ: ದಕ್ಷಿಣ ಕನ್ನಡ ಜಿಲ್ಲೆಯ ದೇವಸ್ಥಾನದಲ್ಲಿ ವ್ಯಾಪಾರ ಧರ್ಮ ದಂಗಲ್ ಮುಂದುವರಿದಿದೆ. ಕರ್ನಾಟಕ ಸರಕಾರದ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ದಲ್ಲಿ ಈ ವರ್ಷವೂ ಅನ್ಯಮತೀಯರ ವ್ಯಾಪಾರಕ್ಕೆ ಬಹಿಷ್ಕಾರ ಮಾಡಲಾಗಿದೆ.ಈ ಬಗೆಗಿನ ಬ್ಯಾನರ್‌ ಪತ್ತೆಯಾಗಿದೆ.
ಹೌದು, ಡಿ.18 ರಂದು ಚಂಪಾ ಷಷ್ಠಿ ನಡೆಯಲಿದ್ದು,ಚಂಪಾ ಷಷ್ಠಿಯ ಸಂದರ್ಭದಲ್ಲಿ ಅನ್ಯಮತೀಯರ ವ್ಯಾಪಾರಕ್ಕೆ ಅವಕಾಶ ನೀಡದಂತೆ ಹಿಂದೂ‌ ಸಂಘಟನೆಗಳಿಂದ ಒತ್ತಾಯ ಕೇಳಿ ಬಂದಿದೆ.ಈ ಹಿನ್ನಲೆಯಲ್ಲಿ ದೇವಳದ ಕಾರ್ಯನಿರ್ವಹಣಾಧಿಕಾರಿಯವರಿಗೆ ಹಿಂದೂ ಸಂಘಟನೆ ಮುಖಂಡರು ಮನವಿ ಸಲ್ಲಿಸಿದ್ದಾರೆ.ಈ ಮೂಲಕ ಚಂಪಾ ಷಷ್ಠಿ ಸಂದರ್ಭದಲ್ಲಿ ನಡೆಯುವ ಜಾತ್ರೆ ಸಂದರ್ಭ ಅನ್ಯಮತೀಯರಿಗೆ‌ ವ್ಯಾಪಾರಕ್ಕೆ‌ ಅವಕಾಶ ನೀಡದಂತೆ ಮನವಿ ಮಾಡಲಾಗಿದೆ.

Advertisement

ಈ ಪ್ರಯುಕ್ತ ಸುಬ್ರಹ್ಮಣ್ಯದ ಕುಮಾರಧಾರ ಬಳಿ ಬ್ಯಾನರ್ ಕೂಡ ಪ್ರತ್ಯಕ್ಷವಾಗಿದೆ.ಹಿಂದೂ ಹಿತರಕ್ಷಣಾ ವೇದಿಕೆ ಸುಬ್ರಹ್ಮಣ್ಯ ಅನ್ನೋ ಹೆಸರಲ್ಲಿ ಬ್ಯಾನರ್ ಕಂಡು ಬಂದಿದ್ದು,ಇತಿಹಾಸ ಪ್ರಸಿದ್ಧ ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಚಂಪಾಷಷ್ಠಿಯ ಸಂದರ್ಭದಲ್ಲಿ ಈ ಪರಿಸರದಲ್ಲಿ ಅನ್ಯಮತೀಯ ವ್ಯಾಪಾರ ವಹಿವಾಟುಗಳನ್ನು ನಿಷೇಧಿಸಲಾಗಿದೆ ಅಂತ ಬ್ಯಾನರ್ ಹಾಕಲಾಗಿದೆ.

Advertisement
Advertisement
Tags :
LatestNewsNewsKannadaಮಂಗಳೂರುಸುಬ್ರಹ್ಮಣ್ಯ
Advertisement
Next Article