For the best experience, open
https://m.newskannada.com
on your mobile browser.
Advertisement

'ನಂದಿ ಗಿರಿಧಾಮ'ಕ್ಕೆ ಪ್ರವಾಸಿಗರಿಗೆ ನಿರ್ಬಂಧ: ಡಿಸಿ ಆದೇಶ

ಹೊಸ ವರ್ಷಾಚರಣೆಗೆ  ನಂದಿಗಿರಿಧಾಮಕ್ಕೆ  ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ. 
04:45 PM Dec 26, 2023 IST | Ashitha S
 ನಂದಿ ಗಿರಿಧಾಮ ಕ್ಕೆ ಪ್ರವಾಸಿಗರಿಗೆ ನಿರ್ಬಂಧ  ಡಿಸಿ ಆದೇಶ

ಚಿಕ್ಕಬಳ್ಳಾಪುರ: ಹೊಸ ವರ್ಷಾಚರಣೆಗೆ  ನಂದಿಗಿರಿಧಾಮಕ್ಕೆ  ಪ್ರವಾಸಿಗರಿಗೆ ನಿರ್ಬಂಧಿಸಲಾಗಿದೆ. ಡಿಸೆಂಬರ್ 31ರ ಸಂಜೆ 6ರಿಂದ ಜನವರಿ 1ರ ಬೆಳಗ್ಗೆ 6 ಗಂಟೆವರೆಗೆ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ನಿರ್ಬಂಧಿಸಿ ಚಿಕ್ಕಬಳ್ಳಾಪುರ ಡಿಸಿ ರವೀಂದ್ರ ಆದೇಶ ಹೊರಡಿಸಿದ್ದಾರೆ.

Advertisement

ಈ ಕುರಿತಂತೆ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಆದೇಶ ಹೊರಡಿಸಿದ್ದು, ಹೊಸ ವರ್ಷಾಚರಣೆಗೆ ನಂದಿ ಗಿರಿಧಾಮಕ್ಕೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ. ಅಂದು ಯಾವುದೇ ಪ್ರವಾಸಿಗರಿಗೆ ನಂದಿ ಗಿರಿಧಾಮಕ್ಕೆ ಪ್ರವೇಶವಿಲ್ಲ ಎಂದು ತಿಳಿಸಿದ್ದಾರೆ.

ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ನಂದಿ ಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಹೊಸ ವರ್ಷದಂದು ನಿರ್ಬಂಧ ವಿಧಿಸಲಾಗಿದೆ. ಹೊಸ ವರ್ಷದ ಬಳಿಕ ಮತ್ತೆ ಪ್ರವಾಸಿಗರ ಪ್ರವೇಶಕ್ಕೆ ನಂದಿ ಗಿರಿಧಾಮಕ್ಕೆ ಅವಕಾಶ ನೀಡಲಾಗುತ್ತದೆ ಎಂದಿದ್ದಾರೆ.

Advertisement

ವಿಶ್ವ ಪ್ರಸಿದ್ಧ ನಂದಿ ಗಿರಿಧಾಮದಲ್ಲಿ 2024ರ ನೂತನ ವರ್ಷವನ್ನು ಅದ್ಧೂರಿಯಾಗಿ ಬರಮಾಡಿಕೊಳ್ಳಬೇಕೆಂಬ ಎಂಬ ಆಸೆ ಇಟ್ಟುಕೊಂಡವರಿಗೆ ನಿರಾಸೆ ಮೂಡಿಸಿದೆ. ನೂತನ ವರ್ಷಾರಂಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಸಾರ್ವಜನಿಕರಿಗೆ ನಂದಿಗಿರಿಧಾಮ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಬಂಧ ಹೇರಿದೆ.

Advertisement
Tags :
Advertisement