ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆ: ಎರಡು ವಾರಗಳ ಗಡುವು ವಿಸ್ತರಣೆ
ಬೆಂಗಳೂರು: ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ಬೋರ್ಡ್ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು, ಬೋರ್ಡ್ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ.
ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.
ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ ಎಂದರು.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ ಮುಖ್ಯ. 2 ವಾರಗಳ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ಡೆಡ್ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ ಕಾಲ ವಿಸ್ತರಿಸಲಾಗಿದೆ.
ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿಹಿಡಿಯುವುದು ಅತಿ…
— DK Shivakumar (@DKShivakumar) February 29, 2024