ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಶೇ.60 ರಷ್ಟು ಕನ್ನಡ ಬೋರ್ಡ್ ಅಳವಡಿಕೆ: ಎರಡು ವಾರಗಳ ಗಡುವು ವಿಸ್ತರಣೆ

ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು,  ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ.
10:36 AM Feb 29, 2024 IST | Ashika S

ಬೆಂಗಳೂರು: ರಾಜ್ಯದ ಎಲ್ಲಾ ಮಳಿಗೆಗಳಲ್ಲಿ ಅಳವಡಿಸುವ ಬೋರ್ಡ್​ಗಳಲ್ಲಿ ಶೇ.60 ರಷ್ಟು ಕನ್ನಡ ಇರಬೇಕು,  ಬೋರ್ಡ್​ಗಳ ಬದಲಾವಣೆಗೆ ನೀಡಲಾಗಿದ್ದ ಗಡುವು ನಿನ್ನೆಗೆ ಮುಕ್ತಾಯಗೊಂಡಿದೆ.

Advertisement

ಈ ನಡುವೆ ಒಂದಷ್ಟು ವ್ಯಾಪಾರಸ್ತರು ಹಾಗೂ ಕಂಪನಿಗಳು ನಿಯಮಾನುಸಾರ ಬೋರ್ಡ್ ಅಳವಡಿಕೆಗೆ ಮತ್ತಷ್ಟು ಸಮಯಾವಕಾಶ ಕೇಳಿದ್ದರು. ಹೀಗಾಗಿ ಶೇ.60 ರಷ್ಟು ಕನ್ನಡದಲ್ಲಿ ನಾಮಫಲಕ ಅಳವಡಿಕೆಗೆ ಎರಡು ವಾರಗಳ ಕಾಲವಕಾಶ ನೀಡಲಾಗಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಾಣಿಜ್ಯ ಮಳಿಗೆಗಳು ಮೊದಲಾದಕಡೆ ಶೇ.60ರಷ್ಟು‌ ಕನ್ನಡ ನಾಮಫಲಕಗಳನ್ನು ಅಳವಡಿಸಲು ಹೆಚ್ಚಿನ ಸಮಯ ಬೇಕೆಂಬುದನ್ನು ಪರಿಗಣಿಸಿ, ಈಗಾಗಲೇ ನೀಡಲಾಗಿದ್ದ ಗಡುವನ್ನು 2 ವಾರಗಳ‌ ಕಾಲ ವಿಸ್ತರಿಸಲಾಗಿದೆ ಎಂದರು.

Advertisement

ಕನ್ನಡ ನಾಡಿನಲ್ಲಿ ಕನ್ನಡವೇ ಸಾರ್ವಭೌಮ, ಹಾಗಾಗಿ ನಮ್ಮ ಹೃದಯದ ಭಾಷೆಯನ್ನು ಎತ್ತಿ‌ಹಿಡಿಯುವುದು ಅತಿ ಮುಖ್ಯ. 2 ವಾರಗಳ‌ ನಂತರ ಎಲ್ಲರೂ ಕಾನೂನು ಪಾಲನೆ ಮಾಡುತ್ತಾರೆ‌ ಎಂದು ನಿರೀಕ್ಷಿಸಿದ್ದೇನೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.

ಡೆಡ್​ಲೈನ್ ಮುಕ್ತಾಯ ಹಿನ್ನೆಲೆ ಇಂದು ನಾಮಫಲಕ ಪರಿಶೀಲನೆ ನಡೆಸಲು ಮುಂದಾದ ಪಾಲಿಕೆ ಅಧಿಕಾರಿಗಳು, ಶೇಕಡಾ 60ರಷ್ಟು ಕನ್ನಡ ನಾಮಫಲಕ ಅಳವಡಿಸದಿದ್ದರೆ ಪರವಾನಗಿ ರದ್ದು ಮಾಡಿ ಬೀಗ ಜಡಿಯುವುದಾಗಿ ಈಗಾಗಲೇ ಆದೇಶ ಹೊರಡಿಸಿದ್ದಾರೆ.

Advertisement
Tags :
LatetsNewsNewsKannadaಕನ್ನಡಬದಲಾವಣೆಬೋರ್ಡ್
Advertisement
Next Article