ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಭೀಕರ ಅಪಘಾತ: ಬಾಲಕಿ ಸೇರಿ ಇಬ್ಬರು ಸಜೀವ ದಹನ

ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.
09:27 AM Dec 07, 2023 IST | Ashika S

ಬೆಳಗಾವಿ: ಬೆಳಗಾವಿಯಲ್ಲಿ ಭೀಕರ ಅಪಘಾತವೊಂದು ನಡೆದಿದೆ. ಟಿಪ್ಪರ್ ಮತ್ತು ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಾಲಕಿ ಸೇರಿ ಇಬ್ಬರು ಸಜೀವ ದಹನವಾಗಿದ್ದಾರೆ. ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ಈ ದುರ್ಘಟನೆ ಸಂಭವಿಸಿದೆ.

Advertisement

ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24) ಹಾಗೂ ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಬೆಂಕಿ ಹೊತ್ತಿಕೊಂಡಿದ್ದು, ಕಾರಿನಲ್ಲಿದ್ದ ಸಮಿಕ್ಷಾ ಮತ್ತು ಮೋಹನ್ ಮಾರುತಿ ಸಜೀವ ದಹನವಾಗಿದ್ದಾರೆ.

ಮದುವೆ ಮುಗಿಸಿಕೊಂಡು ವಾಪಸ್ ಬಂಬರಗಾ ಗ್ರಾಮಕ್ಕೆ ಹೊರಟಿದ್ದ ಕಾರು, ಅಡ್ಡ ಬಂದ ಟಿಪ್ಪರ್‌ಗೆ ಗುದ್ದಿದೆ. ಪರಿಣಾಮ ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಬೆಂಕಿ ಹೊತ್ತಿಕೊಂಡಿದೆ. ಈ ಹಿನ್ನೆಲೆಯಲ್ಲಿ ಎರಡೂ ವಾಹನಗಳು ಹೊತ್ತಿ ಉರಿದಿದ್ದು, ಕಾರಿನಲ್ಲಿದ್ದ ಇಬ್ಬರು ಸಜೀವ ದಹನವಾಗಿದ್ದರೆ ಮತ್ತಿಬ್ಬರಿಗೆ ಗಂಭೀರ ಗಾಯಗಳಾಗಿವೆ.

Advertisement

Advertisement
Tags :
LatetsNewsNewsKannadaಅಪಘಾತಕಾರುಟಿಪ್ಪರ್ಬೆಳಗಾವಿ
Advertisement
Next Article