ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ರಾಜ್ಯದ 4 ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸಲು ನಿರ್ಧಾರ

ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
01:10 PM Dec 15, 2023 IST | Ashika S

ಬೆಂಗಳೂರು: ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರನ್ನು ಬದಲಾಯಿಸುವ ನಿರ್ಣಯವನ್ನು ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.

Advertisement

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್‌ ಮಂಡಿಸಿದ ನಿರ್ಣಯಕ್ಕೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರು ಒಮ್ಮತದಿಂದ ಅಂಗೀಕಾರ ನೀಡಿದ್ದಾರೆ.

ನಿರ್ಣಯದ ಪ್ರಕಾರ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಡಾ.ಕೆ.ವಿ.ಪುಟ್ಟಪ್ಪ (ಕುವೆಂಪು) ಹಾಗೂ ವಿಜಯಪುರ ವಿಮಾನ ನಿಲ್ದಾಣಕ್ಕೆ ಶ್ರೀ ಜಗದ್ಜ್ಯೋತಿ ಬಸವೇಶ್ವರ ಹೆಸರಿಸಲು ನಿರ್ಧರಿಸಲಾಗಿದೆ.

Advertisement

ಪ್ರತಿಪಕ್ಷ ನಾಯಕ ಆರ್‌. ಅಶೋಕ್‌, ಬಿಜೆಪಿಯ ಬಸನಗೌಡ ಪಾಟೀಲ್‌ ಯತ್ನಾಳ್‌, ಅರವಿಂದ ಬೆಲ್ಲದ್‌, ಆರಗ ಜ್ಞಾನೇಂದ್ರ, ಕಾಂಗ್ರೆಸ್‌ನ ಅಬ್ಬಯ್ಯ ಪ್ರಸಾದ್‌ ಸೇರಿದಂತೆ ಹಲವರು ಸ್ವಾಗತಿಸಿದರು.

ಬಿಜೆಪಿಯ ವಿ.ಸುನೀಲ್‌ ಕುಮಾರ್‌, ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡಬೇಕು ಎಂದು ಆಗ್ರಹಿಸಿದರು. ಅದಕ್ಕೆ ಪ್ರತಿಕ್ರಿಯಿಸಿದ ಎಂ.ಬಿ. ಪಾಟೀಲ್‌, ''ಮಂಗಳೂರು, ಮೈಸೂರು, ಕಲಬುರಗಿ ವಿಮಾನ ನಿಲ್ದಾಣಕ್ಕೆ ಗಣ್ಯರ ಹೆಸರಿಡುವ ಬಗ್ಗೆ ಸಚಿವ ಸಂಪುಟದಲ್ಲಿ ಚರ್ಚಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು,'' ಎಂದು ಹೇಳಿದರು.

Advertisement
Tags :
LatestNewsNewsKannadaಕರ್ನಾಟಕ ವಿಧಾನಸಭೆರಾಜ್ಯವಿಮಾನ ನಿಲ್ದಾಣ
Advertisement
Next Article