ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ವಿರಾಟ್‌ ಕೊಹ್ಲಿಗೂ ತಟ್ಟಿದ ಡೀಪ್‌ ಫೇಕ್‌ ಬಿಸಿ!

ಹಲವು ತಾರಾ ನಟ-ನಟಿಯರು, ದಿಗ್ಗಜ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಫೇಕ್‌ ಬಳಿಕ ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿಗೂ ಡೀಪ್‌ ಫೇಕ್‌ ಬಿಸಿ ತಟ್ಟಿದೆ. ಕೊಹ್ಲಿ ಅವರು ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ಪ್ರಚಾರ ಮಾಡುತ್ತಿರುವಂತೆ ಕಾಣುವ ಎಡಿಟೆಡ್‌ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ. ಕೊಹ್ಲಿ ಸಂದರ್ಶನವೊಂದರಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಕಿಡಿಗೇಡಿಗಳು ಎಡಿಟ್‌ ಮಾಡಿದ್ದಾರೆ. ಎಐ ತಂತ್ರಜ್ಞಾನದ ಮೂಲಕ ಕೊಹ್ಲಿಯ ಶಬ್ಧವನ್ನು ಬ
11:38 AM Feb 21, 2024 IST | Ashitha S

ನವದೆಹಲಿ: ಹಲವು ತಾರಾ ನಟ-ನಟಿಯರು, ದಿಗ್ಗಜ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಫೇಕ್‌ ಬಳಿಕ ಭಾರತ ಕ್ರಿಕೆಟ್‌ ತಂಡದ ಸ್ಟಾರ್‌ ಆಟಗಾರ ವಿರಾಟ್‌ ಕೊಹ್ಲಿಗೂ ಡೀಪ್‌ ಫೇಕ್‌ ಬಿಸಿ ತಟ್ಟಿದೆ. ಕೊಹ್ಲಿ ಅವರು ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ಪ್ರಚಾರ ಮಾಡುತ್ತಿರುವಂತೆ ಕಾಣುವ ಎಡಿಟೆಡ್‌ ವಿಡಿಯೋ ಸಾಮಾಜಿಕ ತಾಣಗಳಲ್ಲಿ ವೈರಲ್‌ ಆಗಿದೆ.

Advertisement

ಕೊಹ್ಲಿ ಸಂದರ್ಶನವೊಂದರಲ್ಲಿ ಮಾತನಾಡುತ್ತಿರುವ ದೃಶ್ಯವನ್ನು ಕಿಡಿಗೇಡಿಗಳು ಎಡಿಟ್‌ ಮಾಡಿದ್ದಾರೆ. ಎಐ ತಂತ್ರಜ್ಞಾನದ ಮೂಲಕ ಕೊಹ್ಲಿಯ ಶಬ್ಧವನ್ನು ಬಳಕೆ ಮಾಡಿ ಆ್ಯಪ್‌ನ ಪ್ರಚಾರ ಮಾಡುತ್ತಿರುವಂತೆ ವಿಡಿಯೋ ಹರಿಬಿಟ್ಟಿದ್ದಾರೆ. ಕಡಿಮೆ ಹಣ ಹೂಡಿಕೆ ಮಾಡಿ ಲಕ್ಷಾಂತರ ರೂಪಾಯಿ ಗಳಿಸುವ ತಂತ್ರಗಳನ್ನು ವಿರಾಟ್‌ ಕೊಹ್ಲಿ ಹೇಳುವ ರೀತಿ ವಿಡಿಯೋದಲ್ಲಿ ತೋರಿಸಲಾಗಿದೆ. ಅಲ್ಲದೆ ಸುದ್ದಿ ಮಾಧ್ಯಮ ನಿರೂಪಕಿಯೊಬ್ಬರ ಶಬ್ಧವನ್ನೂ ಎಡಿಟ್‌ ಮಾಡಿದ್ದಾರೆ.

ಈ ಮೊದಲು ಸಚಿನ್‌ ತೆಂಡುಲ್ಕರ್ ಅವರು ಕೂಡಾ ಬೆಟ್ಟಿಂಗ್‌ ಆ್ಯಪ್‌ ಬಗ್ಗೆ ಪ್ರಚಾರ ಮಾಡುವ ರೀತಿ ವಿಡಿಯೋ ಹರಿಬಿಡಲಾಗಿತ್ತು. ಬಳಿಕ ತಂತ್ರಜ್ಞಾನದ ದುರ್ಬಳಕೆ ಬಗ್ಗೆ ಆಘಾತ ವ್ಯಕ್ತಪಡಿಸಿದ್ದ ಸಚಿನ್‌, ಡೀಪ್‌ ಫೇಕ್‌ ಹಾಗೂ ತಪ್ಪು ಮಾಹಿತಿ ಹರಡುವಿಕೆಯನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವ ಅಗತ್ಯವಿದೆ ಎಂದು ಹೇಳಿದ್ದರು.

Advertisement

ಇನ್ನು ಕೊಹ್ಲಿ ಅಭಿಮಾನಿಗಳಿಗೆ ವಿಶೇಷ ಸಿಹಿ ಸುದ್ದಿಯೆಂದರೇ, ವಿರಾಟ್‌ ಕೊಹ್ಲಿ ಅವರ ಪತ್ನಿ, ಖ್ಯಾತ ಬಾಲಿವುಡ್‌ ನಟಿ ಅನುಷ್ಕಾ ಶರ್ಮಾ 2ನೇ ಮಗುವಿಗೆ ಜನ್ಮ ನೀಡಿದ್ದಾರೆ. ಈ ಬಗ್ಗೆ ವಿರಾಟ್‌ ಕೊಹ್ಲಿ ಮಂಗಳವಾರ ಸಾಮಾಜಿಕ ತಾಣಗಳಲ್ಲಿ ಮಾಹಿತಿ ಹಂಚಿಕೊಂಡಿದ್ದು, ಫೆ.15ರಂದು ಅನುಷ್ಕಾ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ಅಕಾಯ್‌ ಎಂದು ನಾಮಕರಣ ಮಾಡಿದ್ದಾಗಿ ತಿಳಿಸಿದ್ದಾರೆ.

https://twitter.com/CrickologyNews/status/1759878753587700183/photo/1

 

Advertisement
Tags :
alertdeepfakeindiaLatestNewsNewsKannadaವಿರಾಟ್ ಕೊಹ್ಲಿ
Advertisement
Next Article