ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಕೋರ್ಟ್‌ಗೆ ಶರಣಾದ ರಾಹುಲ್ ಗಾಂಧಿಗೆ ಬಿಗ್ ರಿಲೀಫ್!

ಭಾರತ್ ಜೋಡೋ ನ್ಯಾಯ ಯಾತ್ರೆ, ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಬಿಡುವಿಲ್ಲದೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.
03:58 PM Feb 20, 2024 IST | Ashitha S

ಸುಲ್ತಾನ್‌ಪುರ್: ಭಾರತ್ ಜೋಡೋ ನ್ಯಾಯ ಯಾತ್ರೆ, ಲೋಕಸಭಾ ಚುನಾವಣೆಗೆ ಸೀಟು ಹಂಚಿಕೆ ಸೇರಿದಂತೆ ಬಿಡುವಿಲ್ಲದೆ ಚುನಾವಣಾ ಅಖಾಡಕ್ಕೆ ಧುಮುಕಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಬಿಗ್ ರಿಲೀಫ್ ಸಿಕ್ಕಿದೆ.

Advertisement

2018ರಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ನೀಡಿದ್ದ ಹೇಳಿಕೆ ವಿರುದ್ಧ ಡಿಫಮೇಶನ್ ಕೇಸ್ ದಾಖಲಾಗಿತ್ತು. ಈ ಪ್ರಕರಣ ಸಂಬಂಧ ರಾಹುಲ್ ಗಾಂಧಿ ಇಂದು ಉತ್ತರ ಪ್ರದೇಶದ ಸುಲ್ತಾನ್‌ಪುರ ಜಿಲ್ಲಾ ನ್ಯಾಯಾಲಯಕ್ಕೆ ಶರಣಾಗಿದ್ದಾರೆ. ರಾಹುಲ್ ಗಾಂಧಿಯನ್ನು 30 ರಿಂದ 45 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಬಳಿಕ ರಾಹುಲ್ ಗಾಂಧಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಕೋರ್ಟ್ ಪುರಸ್ಕರಿಸಿತ್ತು.

ಈ ಪ್ರಕರಣ ಸಂಬಂಧ ರಾಹುಲ್ ಗಾಂಧಿ ಇಂದು ಭಾರತ್ ಜೋಡೋ ನ್ಯಾಯ ಯಾತ್ರೆ ನಡುವೆ ಸುಲ್ತಾನ್‌ಪುರ್ ಜಿಲ್ಲಾ ನ್ಯಾಯಾಲಕ್ಕೆ ಹಾಜರಾಗಿದ್ದರು. ಕೋರ್ಟ್‌ಗೆ ಶರಣಾದ ರಾಹುಲ್ ಗಾಂಧಿಯನ್ನು 35 ರಿಂದ 40 ನಿಮಿಷಗಳ ಕಾಲ ಕಸ್ಟಡಿಗೆ ತೆಗೆದುಕೊಳ್ಳಲಾಗಿತ್ತು. ಬಳಿಕ ರಾಹುಲ್ ಗಾಂಧಿ ಪರವಾಗಿ ವಕೀಲ ಸಂತೋಶ್ ಪಾಂಡೆ ಜಾಮೀನು ಅರ್ಜಿ ಸಲ್ಲಿಸಿದ್ದರು. ರಾಹುಲ್ ಗಾಂಧಿ ಬೇಲ್ ಅರ್ಜಿ ಪುರಸ್ಕರಿಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿತ್ತು. ಮುಂದಿನ ವಿಚಾರಣ ದಿನಾಂಂಕವನ್ನು ಕೋರ್ಟ್ ನೀಡಿಲ್ಲ. ಇತ್ತ ರಾಹುಲ್ ಗಾಂಧಿ ಯಾವುದೇ ಮಾನಹಾನಿಕರ ಹೇಳಿಕೆ ನೀಡಿಲ್ಲ. ಈ ವಿಚಾರದಲ್ಲಿ ರಾಹುಲ್ ಗಾಂಧಿ ಅಮಾಯಕರು ಎಂದು ಸಂತೋಶ್ ಪಾಂಡೆ ಮಾಧ್ಯಮ ಮುಂದೆ ಹೇಳಿದ್ದಾರೆ.

Advertisement

ಇಬ್ಬರು ಶ್ಯೂರಿಟಿ ಹಾಗೂ 25 ಸಾವಿರ ರೂಪಾಯಿ ಬಾಂಡ್ ಕೋರ್ಟ್‌ಗೆ ಕಟ್ಟಿದ ರಾಹುಲ್ ಗಾಂಧಿ ಜಾಮೀನು ಪಡೆದಿದ್ದಾರೆ. ಇದೀಗ ರಾಹುಲ್ ಗಾಂಧಿ ಮತ್ತೆ ತಮ್ಮ ಭಾರತ್ ಜೋಡೋ ನ್ಯಾಯಾ ಯಾತ್ರೆಯಲ್ಲಿ ತೊಡಗಿಸಿಕೊಳ್ಳಲಿದ್ದಾರೆ.

 

Advertisement
Tags :
BJPCongressindiaNewsKannadaನವದೆಹಲಿರಾಹುಲ್
Advertisement
Next Article