For the best experience, open
https://m.newskannada.com
on your mobile browser.
Advertisement

ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ: ಎ.ಎಸ್. ಪಾಟೀಲ್‌ ನಡಹಳ್ಳಿ

ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ರದ್ದುಗೊಳಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್‌ ನಡಹಳ್ಳಿ ಆರೋಪಿಸಿದರು.
12:24 PM Apr 04, 2024 IST | Chaitra Kulal
ರಾಜ್ಯದ 28 ಲೋಕಸಭಾ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆ ಸೋಲು ನಿಶ್ಚಿತ  ಎ ಎಸ್  ಪಾಟೀಲ್‌ ನಡಹಳ್ಳಿ

ಉಡುಪಿ: ಬಿಜೆಪಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಜಾರಿಯಾಗಿದ್ದ ರೈತಪರ ಯೋಜನೆಗಳನ್ನು ಕಾಂಗ್ರೆಸ್‌ ನೇತೃತ್ವದ ಸರ್ಕಾರ ರದ್ದುಗೊಳಿಸುವ ಮೂಲಕ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಅಧ್ಯಕ್ಷ ಎ.ಎಸ್. ಪಾಟೀಲ್‌ ನಡಹಳ್ಳಿ ಆರೋಪಿಸಿದರು.

Advertisement

ಉಡುಪಿಯ ಬಿಜೆಪಿ ಮಾಧ್ಯಮ ಕೇಂದ್ರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಹಾಲಿನ ಪ್ರೋತ್ಸಾಹ ಧನವನ್ನು ₹7ಕ್ಕೆ ಹೆಚ್ಚಿಸುವುದಾಗಿ ಹೇಳಿತ್ತು. ಅಧಿಕಾರಕ್ಕೆ ಬಂದ ಬಳಿಕ ಬಿಜೆಪಿ ಸರ್ಕಾರದ ಅವಧಿಯಲ್ಲಿದ್ದ ₹5 ಪ್ರೋತ್ಸಾಹ ಧನವನ್ನು ಬಿಡುಗಡೆ ಮಾಡದೆ ತಡೆ ಹಿಡಿಯಿತು. ₹717 ಕೋಟಿ ಹಾಲಿನ. ಪ್ರೋತ್ಸಾಹಧನ ಬಾಕಿ ಇದೆ ಎಂದರು.

ಬೊಮ್ಮಾಯಿ ಸರ್ಕಾರದ ಅವಧಿಯಲ್ಲಿ ರೈತರ ಮಕ್ಕಳಿಗೆ ವಿದ್ಯಾನಿಧಿ ಯೋಜನೆ ಜಾರಿಗೆ ತರಲಾಗಿತ್ತು. ಪ್ರಸ್ತುತ ಯೋಜನೆಯನ್ನು ಕೈಬಿಡಲಾಗಿದೆ. ರೈತರಿಗೆ ಡೀಸೆಲ್ ಸಬ್ಸಿಡಿ ಯೋಜನೆಯೂ ರದ್ದಾಗಿದೆ ಎಂದು ದೂರಿದರು. ಲೋಕಸಭಾ ಚುನಾವಣೆಯಲ್ಲಿ 28 ಕ್ಷೇತ್ರಗಳಲ್ಲೂ ಸೋಲು ನಿಶ್ಚಿತ ಎಂಬ ಸತ್ಯ ಕಾಂಗ್ರೆಸ್‌ಗೆ ಅರಿವಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು, ಚಾಮರಾಜ ನಗರ ಕ್ಷೇತ್ರ ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Advertisement

Advertisement
Tags :
Advertisement