ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ದೆಹಲಿ ವಾಯುಮಾಲಿನ್ಯ ದುರಂತ: ಕೃತಕ ಮಳೆ ಸುರಿಸಲು ಪ್ಲ್ಯಾನ್‌

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯದ ವಿಚಾರದಲ್ಲಿ ಜಗತ್ತಿನಲ್ಲಿಯೇ ಅತಿ ನಿಕೃಷ್ಟ ಸ್ಥಿತಿಯಲ್ಲಿದೆ. ಈ ನಿಟ್ಟಿನಲ್ಲಿ ವಾಯು ಮಾಲಿನ್ಯ ನಿಯಂತ್ರಿಸಲು ಈ ತಿಂಗಳು ಮೋಡ ಬಿತ್ತನೆ ಮೂಲಕ ಕೃತಕ ಮಳೆ ಸುರಿಸಲು ಸರ್ಕಾರ ಯೋಜಿಸುತ್ತಿದೆ ಎಂದು ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ. ಈ ಸಂಬಂಧ ಸಚಿವ ರೈ ಅವರು ಐಐಟಿ ಕಾನ್ಪುರ ವಿಜ್ಞಾನಿಗಳೊಂದಿಗೆ ಸಭೆ ನಡೆಸಿದ್ದು, ವಾತಾವರಣದಲ್ಲಿ ಮೋಡಗಳು ಅಥವಾ ತೇವಾಂಶವಿದ್ದರೆ ಮಾತ್ರ ಮೋಡ ಬಿತ್ತನೆ ಮಾಡಲು ಯತ್ನಿಸಬಹುದು ಎಂದಿದ್ದಾರೆ.
10:40 PM Nov 08, 2023 IST | Umesha HS

"ನವೆಂಬರ್ 20-21ರ ಸುಮಾರಿಗೆ ಮೋಡ ಬಿತ್ತನೆಗೆ ಸೂಕ್ತ ವಾತಾವರಣ ಸೃಷ್ಟಿಯಾಗಬಹುದು ಎಂದು ತಜ್ಞರು ಹೇಳಿದ್ದಾರೆ. ಈ ನಿಟ್ಟಿನಲ್ಲಿ ಪ್ರಸ್ತಾವನೆಯನ್ನು ಸಿದ್ಧಪಡಿಸಲು ನಾವು ವಿಜ್ಞಾನಿಗಳಿಗೆ ಕೇಳಿಕೊಂಡಿದ್ದೇವೆ. ಅದನ್ನು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಾಗುವುದು" ಎಂದು ಸಚಿವರು ತಿಳಿಸಿದ್ದಾರೆ. ಇದೇ ವೇಳೆ, ಸುಪ್ರೀಂ ಕೋರ್ಟ್‌ ಆದೇಶದಂತೆ ದೆಹಲಿಗೆ ಆಪ್ ಆಧಾರಿತ ಟ್ಯಾಕ್ಸಿಗಳ ಪ್ರವೇಶವನ್ನು ನಿಷೇಧಿಸಲಾಗಿದೆ ಎಂದು ಸಚಿವ ಗೋಪಾಲ್ ರೈ ಅವರು ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಕಾರುಗಳಿಗೆ ಸಮ-ಬೆಸ ನಿಯಮ ಜಾರಿಗೊಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Advertisement
Advertisement
Tags :
CARindiaRAINನವದೆಹಲಿಮಳೆರಾಜಧಾನಿವಾಯುಮಾಲಿನ್ಯ
Advertisement
Next Article