For the best experience, open
https://m.newskannada.com
on your mobile browser.
Advertisement

ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ: ತೀರ್ಪು ಕಾಯ್ದಿರಿಸಿದ ಹೈಕೋರ್ಟ್

 ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ.
05:47 PM Apr 03, 2024 IST | Ashitha S
ಕೇಜ್ರಿವಾಲ್ ಬಂಧನ ಪ್ರಶ್ನಿಸಿ ಅರ್ಜಿ  ತೀರ್ಪು ಕಾಯ್ದಿರಿಸಿದ ಹೈಕೋರ್ಟ್

ನವದೆಹಲಿ: ರದ್ದಾಗಿರುವ ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್, ಬುಧವಾರ ತೀರ್ಪು ಕಾಯ್ದಿರಿಸಿದೆ.

Advertisement

ಆಮ್ ಆದ್ಮಿ ಪಕ್ಷದ(ಎಎಪಿ) ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರು ತಮ್ಮ ಬಂಧನ ಮತ್ತು ಇಡಿ ಕಸ್ಟಡಿಯನ್ನು ಪ್ರಶ್ನಿಸಿ ದೆಹಲಿ ಹೈಕೋರ್ಟ್ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಕಾಯ್ದಿರಿಸಿದೆ. ಅರವಿಂದ್ ಕೇಜ್ರಿವಾಲ್ ಅವರನ್ನು ಕಳೆದ ಸೋಮವಾರ ದೆಹಲಿಯ ರೋಸ್ ಅವೆನ್ಯೂ ಕೋರ್ಟ್ 15 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿಯನ್ನು "ಕಿಂಗ್‌ಪಿನ್" ಎಂದು ಇಡಿ ಆರೋಪಿಸಿದ್ದು, ಎಎಪಿ ನಾಯಕ "ತಪ್ಪಿಸಿಕೊಳ್ಳುವ ಉತ್ತರ" ನೀಡಿದ್ದಾರೆ ಮತ್ತು ತನಿಖೆಗೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚುತ್ತಿದ್ದಾರೆ ಎಂದು ನ್ಯಾಯಾಲಯಕ್ಕೆ ತಿಳಿಸಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ಸಂಸ್ಥೆ ಮಾರ್ಚ್ 21 ರಂದು ಕೇಜ್ರಿವಾಲ್ ಅವರನ್ನು ಬಂಧಿಸಿದೆ.

Advertisement

Advertisement
Tags :
Advertisement