ಕರ್ನಾಟಕ | ಬೆಂಗಳೂರುಮೈಸೂರುಮಲೆನಾಡುಬೆಳಗಾವಿಕರಾವಳಿಕಲಬುರಗಿ
ಹೊರನಾಡ ಕನ್ನಡಿಗರು
ದೇಶ-ವಿದೇಶ | ವಿದೇಶದೇಶ
ವಿಶೇಷ
ಗಾಂಧಿನಗರ | ಸಾಂಡಲ್ ವುಡ್
ಮನರಂಜನೆಕ್ರೀಡೆಕ್ಯಾಂಪಸ್
ಇತರೆ | ಆರೋಗ್ಯಅಡುಗೆ ಮನೆಸಮುದಾಯಕ್ರೈಮ್ಶಿಕ್ಷಣವಿಡಿಯೊಭವಿಷ್ಯಫೋಟೊ ನ್ಯೂಸ್ಪಾಡ್‌ಕಾಸ್ಟ್‌ಉದ್ಯೋಗ
Advertisement

ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ.
06:42 AM May 09, 2024 IST | Nisarga K
ಇಂದು ಕೊಡಗು,ಚಿಕ್ಕಮಗಳೂರು ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮೇ 9ರಂದು ಬಿರುಗಾಳಿಯೊಂದಿಗೆ ಗಾಳಿಯೊಂದಿಗೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಅದೇ ರೀತಿ ಬಳ್ಳಾರಿ, ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Advertisement

ಇನ್ನು ತುಮಕೂರು ಮತ್ತು ವಿಜಯನಗರ ಜಿಲ್ಲೆಗಳು, ದಕ್ಷಿಣ ಕನ್ನಡ ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರವಾದ ಮಳೆ/ ಗುಡುಗು ಸಹಿತ ಗಾಳಿ (30-40 kmph) ಉಂಟಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ತಿಳಿಸಿದೆ.

ಇದೇ ರೀತಿ ಮೇ 15ರವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿರಿ ನೀಡಿದೆ.

Advertisement

Advertisement
Tags :
CHIKKAMAGALURUDepartment of MeteorologyKODAGULatestNewsNewsKarnatakaRAINthunder
Advertisement
Next Article