For the best experience, open
https://m.newskannada.com
on your mobile browser.
Advertisement

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.
10:48 PM May 06, 2024 IST | Ashika S
ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ  ಡಿಕೆ ಶಿವಕುಮಾರ್

ಬೆಂಗಳೂರು: ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು ಬಿಡುಗಡೆ ಮಾಡಿದ್ದಾರೆ.

Advertisement

ಇದರ ಬೆನ್ನಲ್ಲೇ ಇದೀಗ ಡಿಕೆ ಶಿವಕುಮಾರ್ ಈ ಬಗ್ಗೆ ಮಾಧ್ಯಮ ಪ್ರಕಟಣೆ ಹೊರಡಿಸಿದ್ದಾರೆ.

ನನಗೂ, ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ. ಹೀಗಾಗಿ ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Advertisement

ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಅಂದಿದ್ದರು. ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ಹೇಳಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ.

ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.

Advertisement
Tags :
Advertisement